ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯ ಅಧಿಸೂಚನೆ
ಸಂಖ್ಯೆ: ಸಿಆಸುಇ 4 ಎಸ್ ಎಸ್ ಆರ್ 2009, ಬೆಂಗಳೂರು, ದಿನಾಂಕ:23.12.2011.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಸೇವೆಗಳು ಮತ್ತು ಕನ್ನಡ ಭಾಷಾ ಪರೀಕ್ಷೆಗಳು) ನಿಯಮಗಳು, 1974ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ:1%ರ 3ನೇ ಪ್ರಕರಣದ 2ಎ) ಉಪ ಪ್ರಕರಣವನ್ನು ಪ್ರಕರಣ 8ರೊಂ೦ದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ ಈ ಕೆಳಕಂಡ ಕರಡು ನಿಯಮಗಳನ್ನು ದಿನಾಂಕ:4.5.2010ರ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯ ಭಾಗ4-ಎ) (ನಂ.473)ದಲ್ಲಿ ಅಧಿಸೂವನೆ ಸಂಖ್ಯೆ; ಸಿಆಸುಇ 4 ಎಸ್ ಎಸ್ ಆರ್ 2009, ದಿನಾಂಕ:23.4.2010ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಬಹುದಾದಂತಹ ಎಲ್ಲಾ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು.
ಸದರಿ ರಾಜ್ಯಪತ್ರವನ್ನು ದಿನಾಂಕ: 4.5.2010ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿತ್ತು. ಸ್ವೀಕೃತವಾದ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ.
ಈಗ ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978ರ (1990ರ ಕರ್ನಾಟಕ ಅಧಿನಿಯಮ ಸಂ೦ಖ್ಯೆ:11)ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂ೦ತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸುತ್ತದೆ, ಎಂದರೆ:-
ನಿಯಮಗಳು