(1) ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಂದು ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜಿನ್ಸಿ ಅಥವಾ AOA, ಅಥವಾ ಲೇವಾದೇವಿದಾರರು, ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ, ಅವುಗಳು ಕಾರ್ಯನಿರ್ವಹಿಸುತ್ತಿರುವ ಅಥವಾ ಕಾರ್ಯನಿರ್ವಹಿಸಲು ಉದ್ದೇಶಿಸಿರುವ ಗ್ರಾಮಗಳು ಅಥವಾ ಪಟ್ಟಣಗಳು, ವಿಧಿಸಿರುವ ಅಥವಾ ವಿಧಿಸಲು ಉದ್ದೇಶಿಸಿರುವ ಬಡ್ಡಿಯ ದರ, ಯುಕ್ತ ಜಾಗರೂಕ ನಿರ್ವಹಣಾ ವ್ಯವಸ್ಥೆ ಮತ್ತು ವಸೂಲಾತಿಯನ್ನು ಜಾರಿಗೊಳಿಸುವ ವ್ಯವಸ್ಥೆ ಹಾಗೂ ಸಾಲ ನೀಡಿಕೆ ಅಥವಾ ನೀಡಲಾದ ಹಣದ ವಸೂಲಾತಿ ಚಟುವಟಿಕೆಯನ್ನು ನಿರ್ವಹಿಸಲು ಅಧಿಕೃತಗೊಳಿಸಲಾದ ವ್ಯಕ್ತಿಗಳ ಪಟ್ಟಿ ಹಾಗೂ ಸಾಲಗಾರನ ಹೆಸರು ಮತ್ತು ವಿಳಾಸ, ಸಾಲಗಾರನಿಗೆ ನೀಡಲಾದ ಒಟ್ಟು ಅಸಲು ಮೊತ್ತ, ಸಾಲಗಾರನಿಂದ ಈಗಾಗಲೇ ವಸೂಲು ಮಾಡಲಾದ ಮೊತ್ತ, ಸಾಲಗಾರನಿಂಂದ ಇನ್ನೂ ವಸೂಲು ಮಾಡಬೇಕಾದ ಬಾಕಿ ಮೊತ್ತ ಹಾಗೂ ಈ ಅಧ್ಯಾದೇಶದ ಉಪಬಂಧಗಳಿಗೆ ಅನುಸಾರವಾಗಿ ಯಾವಾಗಲೂ ಕಾರ್ಯವಹಿಸತಕ್ಕದೆಂಬ ಲಿಖಿತ ಮುಚ್ಚಳಿಕೆಯನ್ನು ಅದರಲ್ಲಿ ನಿರ್ದಿಷ್ಟಪಡಿಸಿ ಜಿಲ್ಲೆಯ ನೋಂದಣಿ ಪ್ರಾಧಿಕಾರಿಯ ಮುಂದೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
(2) ಈ ಅಧ್ಯಾದೇಶದ ಪ್ರಾರಂಭದ ತರುವಾಯ ಸ್ವಸಹಾಯ ಗುಂಪುಗಳಿಗೆ ಸಾಲ NAT ವ್ಯವಹಾರವನ್ನು ನಿರ್ವಹಿಸುತ್ತಿರುವ ಅಥವಾ ಅದನ್ನು ಪ್ರಾರಂಭಿಸಲು ಉದ್ದೇಶಿಸಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ AOA, ಅಥವಾ ಲೇವಾದೇವಿದಾರರು, ನೋಂದಣಿ ಪ್ರಾಧಿಕಾರಿಯಿಂದ ಈ ಅಧ್ಯಾದೇಶದಡಿ ನೋಂದಣಿ ಪಡೆಯದೆ ಯಾವುದೇ ಸಾಲಗಳನ್ನು ಮಂಜೂರು ಮಾಡತಕ್ಕದ್ದಲ್ಲ ಅಥವಾ ಯಾವುದೇ ಸಾಲವನ್ನು ವಸೂಲು ಮಾಡತಕ್ಕದ್ದಲ್ಲ.
(3) ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರು ಒದಗಿಸಲಾದ ವಿವರಗಳನ್ನು ನೋಂದಣಿ ಪ್ರಾಧಿಕಾರಿಯು ಪರಿಶೀಲಿಸತಕ್ಕದ್ದು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾರ್ಯಾಚರಣೆಗಾಗಿ ವಿರ್ದಿಷ್ಟಪಡಿಸಬಹುದಾದಂಥ ವಿಧಾನದಲ್ಲಿ ಒಂದು ವರ್ಷದ ಅವಧಿಗಾಗಿ ನೋಂದಣಿಯನ್ನು ನೀಡತಕ್ಕದ್ದು.
(4) ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ AOA, ಅಥವಾ ಲೇವಾದೇವಿದಾರರು ನೋಂದಣಿಯ ನವೀಕರಣಕ್ಕಾಗಿ ಅರ್ಜಿಸಲ್ಲಿಸಿದಾಗ, (3ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ಒಂದು ವರ್ಷದ ಅವಧಿಯ ಮುಕ್ತಾಯಗೊಳ್ಳುವ ಮೊದಲು, ಅರವತ್ತು ದಿನಗಳೊಳಗಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆ ಉದ್ದೇಶಕ್ಕಾಗಿ ಅರ್ಜಿಯನ್ನು ದಾಖಲಿಸತಕ್ಕದ್ದು ಹಾಗೂ ನೋಂದಣಿ ಪ್ರಾಧಿಕಾರಿಯು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕ್ಷೇತ್ರ ಮಟ್ಟದ ಕಾರ್ಯಕ್ಷಮತೆಯ ಯುಕ್ತ ಪರಿಶೀಲನೆಯ ತರುವಾಯ ಮತ್ತು ನೋಂದಣಿ ವಿಸ್ತರಣೆಯ ಕುರಿತು ಸಾರ್ವಜನಿಕರಿಂದ ಯಾವುವಾದರೂ ಆಕ್ಷೇಪಣೆಗಳಿದ್ದಲ್ಲಿ, ಅವನ್ನು ಆಲಿಸಿದ ತರುವಾಯ ನೋಂದಣಿ ಮುಕ್ತಾಯದ ದಿನಾಂಕಕ್ಕೆ ಮೊದಲು ಕನಿಷ್ಟ ಹದಿನೈದು ದಿನಗಳಲ್ಲಿ ನವೀಕರಣ ಮಂಜೂರು ಮಾಡುವುದೇ ಅಥವಾ ನವೀಕರಣ ನಿರಾಕರಿಸುವುದೇ ಎಂಬುದನ್ನು ತೀರ್ಮಾನಿಸತಕ್ಕದ್ದು.
(5) ಪ್ರತಿ ನೋಂದಣಿ ಪ್ರಾಧಿಕಾರಿಯು ತನ್ನ ಅಧಿಕಾರವ್ಯಾಪ್ತಿಯಡಿಯಲ್ಲಿನ ಪುದೇಶಕ್ಕಾಗಿ ನಿರ್ದಿಷ್ಟಪಡಿಲಾದಂತೆ, ಸಿಂಧುವಾದ ನೋಂದಣಿ ಹೊಂದಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI) ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳ ಅಥವಾ ಲೇವಾದೇವಿದಾರರ ರಿಜಿಸ್ಟರ್ಗಳನ್ನು ನಿರ್ವಹಿಸತಕ್ಕದ್ದು.