(1) ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, ಈ ಅಧ್ಯಾದೇಶದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಬಹದು.
(2) ಈ ಪ್ರಕರಣದ ಮೂಲಕ ಪ್ರದತ್ತವಾದ ನಿಯಮಗಳನ್ನು ರಚಿಸುವ ಅಧಿಕಾರವು ಪೂರ್ವ ಪ್ರಕಟಣೆಯ ತರುವಾಯ ಮಾಡಬಹುದಾದ ನಿಯಮಗಳ ಷರತ್ತಿಗೆ ಒಳಪಟ್ಟೆರತಕ್ಕದ್ದು.
(3) ಈ ಅಧ್ಯಾದೇಶದ ಅಡಿಯಲ್ಲಿ ರಚಿಸಿದ ಪ್ರತಿಯೊಂದು ನಿಯಮ ಅಥವಾ ಅಧಿಸೂಚನೆಯನ್ನು, ಅದನ್ನು ರಚಿಸಿದ ತರುವಾಯ ಸಾಧ್ಯವಾದಷ್ಟು ಬೇಗನೇ ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಅದು ಅಧಿವೇಶನದಲ್ಲಿರುವಾಗ ಒಟ್ಟು ಮೂವತ್ತು ದಿನಗಳಿಗಾಗಿ ಒಳಗೊಂಡಿರಬಹುದಾದ ಒಂದು ಅಥವಾ ಎರಡು ಅಥವಾ ಹೆಚ್ಚಿನ ನಿಕಟೋತ್ತರ ಅಧಿವೇಶನಗಳಲ್ಲಿ ಮಂಡಿಸತಕ್ಕದ್ದು ಮತ್ತು ಅದನ್ನು ಹಾಗೆ ವಿಕಟೋತ್ತರ ಅಧಿವೇಶನಗಳು ಮುಕ್ತಾಯವಾಗುವ ಮೊದಲು, ವಿಧಾನಮಂಡಲದ ಉಭಯಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಟುಮಾಡಬೇಕೆಂದು ಒಪ್ಪಿದರೆ ಅಥವಾ ನಿಯಮವನ್ನು ರಚಿಸಬಾರದೆಂದು ತೀರ್ಮಾನಿಸಿದರೆ, ಆ ತರುವಾಯ ಅಂಥ ನಿಯಮವು ಸಂದರ್ಭಾನುಸಾರ ಹಾಗೆ ಮಾರ್ಪಾಟಾದ ರೀತಿಯಲ್ಲಿ ಮಾತ್ರ ಪರಿಣಾಮಕಾರಿಯಾಗತಕ್ಕದ್ದು ಅಥವಾ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, COP ಮಾರ್ಪಾಟು ಅಥವಾ ರದ್ಧಶಿಯು ಆ ನಿಯಮದ ಅಥವಾ ಅಧಿಸೂಚನೆಯ ಅಡಿಯಲ್ಲಿ ಈ ಹಿಂದೆ ಮಾಡಿದ ಯಾವುದೇ ಕಾರ್ಯದ ಸಿಂಂಧುತ್ವಕ್ಕೆ ಬಾಧಕವಾಗತಕ್ಕದ್ದಲ್ಲ.
ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರು
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
ಜಿ. ಶ್ರೀಧರ್
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.