2023ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 01
ಕರ್ನಾಟಕ ಅಗ್ನಿಶಾಮಕ ದಳ (ತಿದ್ದುಪಡಿ) ಅಧ್ಯಾದೇಶ, 2023
(ಭಾರತ ಗಣರಾಜ್ಯದ ಎಪ್ಪತ್ತನಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2023 ರ ಮಾರ್ಚ್ ತಿಂಗಳ 24ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)
ಕರ್ನಾಟಕ ಅಗ್ನಿಶಾಮಕ ದಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ
42ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧ್ಯಾದೇಶ.
ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ
ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು
ಪ್ರಖ್ಯಾಪಿಸುವುದಕ್ಕೆ ಶ್ರೀಫ್ರ ಕ್ರಮವನ್ನು ತೆಗೆದುಕೊಳ್ಳಲು ಅವಶ್ಯಗೊಳಿಸುವಂಥ ವಿದ್ಯಮಾನಗಳು
ಉಂಟಾಗಿವೆಯೆಂದು ಕರ್ನಾಟಕದ ರಾಜ್ಯಪಾಲರಿಗೆ ಮನದಟ್ನಾಗಿರುವುದರಿಂದ;
ಆದ್ದರಿಂದ, ಈಗ ಭಾರತ ಸಂವಿಧಾನದ 213ನೇ ಅನುಚ್ನೇದದ (SC ಖಂಡದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿರುತ್ತಾರೆ, ಎಂದರೆ:-