ಕರ್ನಾಟಕ ಸರ್ಕಾರ
ಸಂಖ್ಯೆ: ಆಇ 65 ಕವಿಇ 2024
ಕರ್ನಾಟಕ ಸರ್ಕಾರದ ಸಚಿವಾಲಯ
ಸಂಖ್ಯೆ: ಆಇ 65 ಕವಿಇ 2024 ಕರ್ನಾಟಕ ಸರ್ಕಾರದ ಸಚಿವಾಲಯ
ವಿಧಾನಸೌಧ
ಬೆಂಗಳೂರು, ದಿನಾಂಕ:23.10.2024
ಅಧಿಸೂಚನೆ
ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 ರ (1990 ರ ಕರ್ನಾಟಕ ಅಧಿನಿಯಮ 14) ರ 3 ನೇ ಪ್ರಕರಣದ (2) ನೇ ಉಪ ಪ್ರಕರಣದ ಪರಂತುಕದೊಡನೆ ಓದಿಕೊಂಡು ಅದೇ 3 ನೇ ಪ್ರಕರಣದ (1) ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958 ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಈ ಕೆಳಕಂಡ ನಿಯಮಗಳನ್ನು ಈ ಮೂಲಕ ರಚಿಸಿದೆ, ಅಂದರೆ:-
- ಶೀರ್ಷಿಕೆ ಮತ್ತು ಪ್ರಾರಂಭಃ” (1) ಈ ನಿಯಮಗಳನ್ನು ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು. (2) ಈ ನಿಯಮಗಳು 2024 ರ ಆಗಸ್ಟ್ ಒಂದನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.