(1) ಆಯೋಗವು ನಿಯಮ 3ರನ್ವಯ ಸಿದ್ಧಪಡಿಸಲಾದ ಅಂತಿಮ ಪಟ್ಟಿ ಆಧಾರದ ಮೇಲೆ ಮತಕ್ಷೇತ್ರಗಳ ಮೀಸಲಾತಿಯ ಕರಡು ಅಧಿಸೂಚನೆಯನ್ನು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಸಲ್ಲಿಸಲು ಏಳು ದಿನಗಳ ಕಾಲಾವಕಾಶವನ್ನು ನೀಡಿ ರಾಜ್ಯ ಪತ್ರದಲ್ಲಿ ಪ್ರಕಟಿಸತಕ್ಕದ್ದು;
(2)ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಆಯೋಗವು ಪರಿಗಣಿಸತಕ್ಕದ್ದು ಮತ್ತು ಆಕ್ಷೇಪಣೆಗಳನ್ನು ಒಪ್ಪಲು ಅಥವಾ ತಿರಸ್ಕರಿಸಲು ಸೂಕ್ತ ನಿರ್ಣಯಗಳನ್ನು ಕೈಗೊಳ್ಳತಕ್ಕದ್ದು.
(3) ತದನಂತರ ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಮತಕ್ಷೇತ್ರಗಳ ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ಪ್ರಕಟಿಸತಕ್ಕದ್ದು.