ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 54 ಶಾಸನ 2020, ಬೆಂಗಳೂರು, ದಿನಾಂಕ:02.11.2020.
The Karnataka Land Reforms (Second Amendment) Ordinance, 2020 (Karnataka Ordinance No. 23) ಇದರ ಅಧಿಕೃತ ಕನ್ನಡ ಭಾಷಾಂತರವನ್ನು The Karnataka Official Language Act, 1963 ರ ಪ್ರಕರಣ 54ರ ಅಡಿಯಲ್ಲಿ ರಾಜ್ಯಪಾಲರ ಅಧಿಕಾರದ ಮೇರೆಗೆ ಸಾರ್ವಜನಿಕರ ಮಾಹಿತಿಗಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಪತ್ರಿಕೆಯಲ್ಲಿ (ಭಾಗ-1/ ಪ್ರಕಟಿಸಲು ಆದೇಶಿಸಲಾಗಿದೆ.
2020ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 23 ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ಅಧ್ಯಾದೇಶ, 2020
(ಭಾರತ ಗಣರಾಜ್ಯದ ಎಪ್ಪತ್ತೊಂದನೇ ವರ್ಷದಲ್ಲಿ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2020ರ ನವೆಂಬರ್ 2ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)
ಕರ್ನಾಟಕ ಭೂ ಸುಧಾರಣೆಗಳ ಅಧಿನಿಯಮ, 1961ನ್ನು (1962ರ ಕರ್ನಾಟಕ ಅಧಿನಿಯಮ 10) ಮತ್ತಷ್ಟು ತಿದ್ದುಪಡಿ ಮಾಡಲು ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಪ್ರಾಸಂಗಿಕ ವಿಷಯಗಳಿಗಾಗಿ ಒಂದು ಅಧ್ಯಾದೇಶ.
ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನು ಮುಂದೆ. ಕಂಡುಬರುವ ಉದ್ದೆಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸಲು, ಶೀಘ್ರ ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕದ ಮಾನ್ಯ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;
ಈಗ, ಭಾರತ ಸಂವಿಧಾನದ 213ನೇ ಅನುಚ್ಛೇದದ (1ನೇ DOBBS ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕದ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿದ್ದಾರೆ, ಎಂದರೆ:-