(1) ಕುಲಾಧಿಪತಿಯು, ಪ್ರತಿ ಐದು ವರ್ಷಗಳಿಗೊಮ್ಮೆ ವಿಶ್ವವಿದ್ಯಾಲಯದ ಕಾರ್ಯ ನಿರ್ವಹಣೆಯನ್ನು ಪುನರವಲೋಕಿಸುವುದಕ್ಕಾಗಿ ಮತ್ತು ಶಿಫಾರಸುಗಳನ್ನು ಮಾಡುವುದಕ್ಕಾಗಿ ಒಂದು ಆಯೋಗವನ್ನು ರಚಿಸತಕ್ಕದ್ದು.
(2) ಆಯೋಗವು, ಮೂವರಿಗೆ ಕಡಿಮೆಯಿಲ್ಲದಂತೆ ಕುಲಾಧಿಪತಿಯವರು ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿ ನೇಮಿಸಿದ ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಸಿದ್ಧ ಶಿಕ್ಷಣ ತಜ್ಞರನ್ನು ಒಳಗೊಂಡಿರತಕ್ಕದ್ದು. ಅವರಲ್ಲಿ ಒಬ್ಬರು ಅಧ್ಯಕ್ಷರಾಗಿರತಕ್ಕದ್ದು.
(3) ಸದಸ್ಯರ ನೇಮಕಾತಿಯ ನಿಬಂಧನೆಗಳು ಮತ್ತು ಷರತ್ತುಗಳು, ಕುಲಾಧಿಪತಿಯವರು ನಿರ್ಧರಿಸಬಹುದಾದಂಥವುಗಳು ಆಗಿರತಕ್ಕದ್ದು.
(4) ಆಯೋಗವು ತಾನು ಸೂಕ್ತವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ ಕುಲಾಧಿಪತಿಯವರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡತಕ್ಕದ್ದು.
(5) ಕುಲಾಧಿಪತಿಯವರು, ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿ, ಶಿಫಾರಸ್ಸಿನ ಮೇಲೆ ತಾನು ಸೂಕ್ತವೆಂದು ಭಾವಿಸುವಂಥ ಕ್ರಮವನ್ನು ಕೈಗೊಳ್ಳಬಹುದು.
(6) ರಾಜ್ಯ ಸರ್ಕಾರವು, ಕೈಗೊಂಡ ಕ್ರಮವನ್ನು ವಿವರಿಸುವ ಜ್ಞಾಪನ ಪತ್ರದೊಡನೆ ಶಿಫಾರಸುಗಳ ಒಂದು ಪ್ರತಿಯನ್ನು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮುಂದೆ ಮಂಡಿಸತಕ್ಕದ್ದು.