ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ಅಧ್ಯಾದೇಶ, 2020ರ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯ ಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ, ತೊಂದರೆಯನ್ನು ನಿವಾರಿಸುವ ಉದ್ದೇಶಕ್ಕಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ಅಧ್ಯಾದೇಶ, 2020ರ ಉಪಬಂಧಗಳಿಗೆ ಅಸಂಗತವಾಗದ, ತನಗೆ ಅವಶ್ಯವೆಂದು ಅಥವಾ ಯುಕ್ತವೆಂದು ಕಂಡುಬರಬಹುದಾದಂಥ ಉಪಬಂಧವನ್ನು ರಚಿಸಬಹುದು:
ಪರಂತು, ತಿದ್ದುಪಡಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ಅಧ್ಯಾದೇಶ, 2020ರ ಪ್ರಾರಂಭದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯವಾದ ತರುವಾಯ ಯಾವುದೇ ಅಂಥ ಆದೇಶಗಳನ್ನು ಮಾಡತಕ್ಕದ್ದಲ್ಲ.