ಸದರಿ ನಿಯಮಗಳ XXIIIನೇ ಅನುಸೂಚಿಯಲ್ಲಿ, “ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ” ಎಂಬ ಶೀರ್ಷಿಕೆಯ ಅಡಿಯಲ್ಲಿ, “ಎ-ಮೂಲ ಸೌಕರ್ಯ ಅಭಿವೃದ್ಧಿ” ಎಂಬ ಉಪ-ಶೀರ್ಷಿಕೆಯ ಅಡಿಯಲ್ಲಿ,
(i) (1)ನೇ ಬಾಬುವಿನಲ್ಲಿ, “(ಎಚ್)” ನಮೂದುವಿನ ಮತ್ತು ಅವುಗಳಿಗೆ ಸಂಬಂಧಿಸಿದ ನಮೂದುಗಳ ತರುವಾಯ ಈ ಕೆಳಕಂಡದ್ದನ್ನು ಸೇರಿಸತಕ್ಕದ್ದು, ಎಂದರೆ:-
“(i) ಬಂದರುಗಳು ಮತ್ತು ಒಳನಾಡು ಜಲಸಾರಿಗೆ,
(ii) ಕಡಲ ಗೋಡೆಗಳ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳು”
(ii) “ಎ-ಮೂಲ ಸೌಕರ್ಯ ಅಭಿವೃದ್ಧಿ” ಎಂಬ ಉಪ-ಶೀರ್ಷಿಕೆಯ ಮತ್ತು ಅವುಗಳಿಗೆ ಸಂಬಂಧಪಟ್ಟ ನಮೂದುಗಳ ತರುವಾಯ ಈ ಕೆಳಕಂಡದ್ದನ್ನು ಸೇರಿಸತಕ್ಕದ್ದು ಎಂದರೆ:-
“ಬಿ. ಸಂಹಿತೆಗಳು ಮತ್ತು ಕೈಪಿಡಿಗಳು ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯ ಆಡಳಿತ ನಿಯಂತ್ರಣದಲ್ಲಿರುವ ಇಲಾಖೆಗಳಿಗೆ ಸಂಬಂಧಿಸಿದ ಸಂಹಿತೆಗಳು ಮತ್ತು ಕೈಪಿಡಿಗಳು.
ಸಿ. ನೌಕರಿ ಭರ್ತಿ ನಿಯಮಗಳು ಮತ್ತು ನೇಮಕಾತಿಗಳು
(1) ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯ ಆಡಳಿತ ನಿಯಂತ್ರಣದಲ್ಲಿರುವ ಸೇವೆಗಳು ಮತ್ತು ಹುದ್ದೆಗಳಿಗೆ ಸಂಬಂಧಿಸಿದ ನೌಕರಿ ಭರ್ತಿ ನಿಯಮಗಳು.
(2) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಡಿಯಲ್ಲಿ ಬರುವವರನ್ನು ಹೊರತುಪಡಿಸಿ, ಇಲಾಖೆಯ ಆಡಳಿತ ನಿಯಂತ್ರಣದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಂಬಂಧಿಸಿದ ನೇಮಕಾತಿಗಳು, ಸ್ಥಳ ನಿಯುಕ್ತಿಗಳು, ವರ್ಗಾವಣೆಗಳು, ರಜೆ ಮೊದಲಾದವುಗಳು.”