(1) ಈ ಉಪವಿಧಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಘನತ್ಯಾಜ್ಯ ನಿರ್ವಹಣೆ (ಬಿಬಿಎಂಪಿ ಎಸ್ಡಬ್ಲ್ಯುಎಮ್) ಉಪವಿಧಿ, 2019 ಎಂದು ಕರೆಯಬಹುದಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾಯಿತ ಆಡಳಿತ ಮಂಡಳಿಯಿಂದ ಅನುಮೋದನೆಗೊಂಡ ಬಳಿಕ ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಅನ್ವಯವಾಗುವಂತೆ ಇದು ಜಾರಿಗೆ ಬರಲಿದೆ.