(1) ಗ್ರಾಮದಲ್ಲಿ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕಾಂಶದ ಮಹತ್ವದ ಬಗ್ಗೆ ತಿಳುವಳಿಕೆ ಮೂಡಿಸುವುದು.
2 ಗ್ರಾಮದಲ್ಲಿ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಠಿಕಾಂಶದ ಬಗ್ಗೆ ಇರುವ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮುಡಿಸುವುದು. ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕಾಂಶ ಯೋಜನೆಗಳ ಬಗ್ಗೆ ಸರ್ಕಾರದ ಪ್ರಚಾರ ಸಾಮಗ್ರಿಗಳನ್ನು ಪ್ರಚುರಪಡಿಸುವುದು. ಶಾಲೆ, ಅಂಗನವಾಡಿ, ಆಸ್ಪತ್ರೆಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ತಿಳುವಳಿಕೆ ಮೂಡಿಸುವುದು.
-
ಗ್ರಾಮದಲ್ಲಿ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಠಿಕಾಂಶದ ಬಗ್ಗೆಇರುವ ಸರ್ಕಾರದ ಯೋಜನೆಗಳ ಪ್ರಯೋಜನಗಳು ಜನರಿಗೆ ತಲುಪುವಂತೆ ಮಾಡುವುದು.
-
ಗ್ರಾಮದಲ್ಲಿ ಆರೋಗ್ಯ ಯೋಜನೆಗಳ ಪ್ರಯೋಜನಗಳಿಗೆ ಸಂಬಂಧಿಸಿದಂತೆ ಗ್ರಾಮ ಸಭೆಯಲ್ಲಿ ಅರ್ಹ ಫಲಾನುಭವಿಗಳ ಆಯ್ಕೆಗೆ ಕ್ರಮ ವಹಿಸುವುದು.
-
ಹೆಚ್ಐವಿ/ಏಡ್ಸ್ ಮತ್ತಿತರ ಸೋಂಕು ರೋಗಗಳ ಬಗ್ಗೆ ಇರುವ ತಪ್ಪ ತಿಳುವಳಿಕೆ ಹೋಗಲಾಡಿಸಿ ಅವುಗಳನ್ನು ತಡೆಗಟ್ಟುವ ಕೆಲಸದಲ್ಲಿ ಜನರ ವಿಶ್ವಾಸ ಮತ್ತು ಪಾಲುದಾರಿಕೆ ಹೆಚ್ಚಿಸುವುದು.
-
ಗ್ರಾಮದ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಠಿಕಾಂಶದ ಯೋಜನೆಗಳ ಅನುಷ್ಠಾನದಲ್ಲಿ ಸಮುದಾಯದ ಸಹಬಾಗಿತ್ವ ಪಡೆಯುವುದು.