ಸದರಿ ನಿಯಮಗಳ ನಿಯಮ3ರಲ್ಲಿ,-
(ಎ) ಉಪನಿಯಮ (1)ರಲ್ಲಿ “ಯಾವುದೇ ಸರ್ಕಾರಿ ನೌಕರನು, ಈ ನಿಯಮಗಳ ಪ್ರಾರಂಭದ ದಿನಾಂಕದಿಂದ ಹತ್ತು ವರ್ಷಗಳ ಅವಧಿಯೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ ಮುಂಬಡ್ತಿಗೆ ಅರ್ಹನಾಗತಕ್ಕದ್ದಲ್ಲ. ಯಾವುದೇ ಸರ್ಕಾರಿ ನೌಕರನು, ಈ ನಿಯಮಗಳ ಪ್ರಾರಂಭದ ದಿನಾಂಕದಿಂದ ಹನ್ನೊಂದು ವರ್ಷಗಳ ಅವಧಿಯೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ ವಾರ್ಷಿಕ ವೇತನ ಬಡ್ತಿ ಗಳಿಸಲು ಅರ್ಹನಾಗತಕ್ಕದ್ದಲ್ಲ” ಎಂಬ ಪದಗಳ ಬದಲಿಗೆ “ಯಾವುದೇ ಸರ್ಕಾರಿ ನೌಕರನು ದಿನಾಂಕ: 31.122022ರೊಳಗೆ ಪರೀಕ್ಬೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ ಮುಂಬಡ್ತಿ ಮತ್ತು ವಾರ್ಷಿಕ ವೇತನ ಬಡ್ತಿ ಗಳಿಸಲು ಅರ್ಹನಾಗತಕ್ಕದ್ದಲ್ಲ” ಎಂಬ ಪದ ಮತ್ತು ಅಂಕಿಗಳನ್ನು ಪ್ರತಿಸ್ಥಾಪಿಸತಕ್ಕದ್ದು.
(ಬಿ) ಉಪ ನಿಯಮ (2ರಲ್ಲಿ “ಈ ನಿಯಮಗಳ ಪ್ರಾರಂಭದ ದಿನಾಂಕದಿಂದ ಹತ್ತು ವರ್ಷಗಳ ಅವಧಿಯೊಳಗೆ” ಎಂಬ ಪದಗಳ ಬದಲಿಗೆ "ದಿನಾಂಕ: 31.12.2022 ರೊಳಗೆ” ಎಂಬ ಪದ ಮತ್ತು ಅಂಕಿಗಳನ್ನು ಪ್ರತಿಸ್ಥಾಪಿಸತಕ್ಕದ್ದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
(ತೇಜಾವತಿ.ಎನ್)
ಸರ್ಕಾರದ ಅಧೀನ ಕಾರ್ಯದರ್ಶಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ವಿಯಮಗಳು-ವಿಶೇಷ ಕೋಶ).