(1) ರಾಜ್ಯ ಸರ್ಕಾರವು ಅಥವಾ ರಾಜ್ಯ ಸರ್ಕಾರವು ಪ್ರಾಧಿಕೃತಗೊಳಿಸಬಹುದಾದಂಥ ಇತರ ಅಧಿಕಾರಿಯು, ಪ್ರಾಧಿಕಾರದ ಪ್ರಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅವಶ್ಯವೆಂದು ಭಾವಿಸಬಹುದಾದಂಥ ಇತರ ಅಧಿಕಾರಿಗಳನ್ನು ಮತ್ತು ನೌಕರರನ್ನು ನೇಮಕ ಮಾಡಲು ಅಥವಾ ಪ್ರತಿನಿಯೋಜಿಸಲು ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ವಯ ಸರ್ಕಾರಕ್ಕೆ ಅಧಿಕಾರವಿರುತ್ತದೆ.
(2) ಪ್ರಾಧಿಕಾರದ ಅಧಿಕಾರಿ ಮತ್ತು ನೌಕರರ ಸೇವಾ ನಿಬಂಧನೆ ಮತ್ತು ಷರತ್ತುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸಿವಿಲ್ ಸೇವಾ ನಿಯಮಗಳು, 1958, ಕರ್ನಾಟಕ ಸಿವಿಲ್ ಸೇವಾ(ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು, 1957, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 1966 ಮತ್ತು ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 ಅನ್ವಯಿಸುತ್ತವೆ.