ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 47 ಶಾಸನ 2020, ಬೆಂಗಳೂರು, ದಿನಾಂಕ:31.07.2020.
The Karnataka Court Fees and Suits Valuation (Amendment) Ordinance, 2020 ಇದಕ್ಕೆ 2020ರ ಜುಲೈ ತಿಂಗಳ 31ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 18 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.
2020ರ ಕರ್ನಾಟಕ ಅಧ್ಯಾದೇಶ ಸಂಖ್ಯೆ:18 ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ (ತಿದ್ದುಪಡಿ) ಅಧ್ಯಾದೇಶ, 2020
(ಭಾರತ ಗಣರಾಜ್ಯದ ಎಪ್ಪತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2020ರ ಜುಲೈ 31ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ).
ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ವಿರ್ಣಯ ಅಧಿನಿಯಮ, 1958ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧ್ಯಾದೇಶ.
ಕರ್ನಾಟಕ ವಿಧಾನ ಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ ಅಧಿನಿಯಮ, 1958ನ್ನು ತಿದ್ದುಪಡಿ ಮಾಡಲು Atay ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂ೦ಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;
ಆದ್ದರಿಂದ ಈಗ, ಭಾರತ ಸಂವಿಧಾನದ 213ನೇ ಅನುಚ್ನೇದದ (1ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಕರ್ನಾಟಕದ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿದ್ದಾರೆ, ಎಂದರೆ:-