(1) ಈ ನಿಯಮಗಳಲ್ಲಿ ಅನ್ಯಥಾ ಅಗತ್ಯಪಡಿಸಿದ ಹೊರತು,
(ಎ) “ಅಧಿನಿಯಮ” ಎಂದರೆ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2014 (ಕರ್ನಾಟಕ ಅಧಿನಿಯಮ 32)
(ಬಿ) “ನಮೂನೆ” ಎಂದರೆ ಈ ನಿಯಮಗಳಿಗೆ ಅನುಬಂಧಿಸಲಾದ ನಮೂನೆ.
(ಸಿ) “ಅನುಸೂಚಿ” ಎಂದರೆ ಈ ನಿಯಮಗಳಿಗೆ ಅನುಬಂಧಿಸಲಾದ ಅನುಸೂಚಿ.
(2) ಈ ನಿಯಮಗಳಲ್ಲಿ ಬಳಸಿರುವ ಆದರೆ ಪರಿಭಾಷಿಸಿರದ ಪದಗಳು ಮತ್ತು ಪದಾವಳಿಗಳು ಅಧಿನಿಯಮದಲ್ಲಿ ಅವುಗಳಿಗೆ ಕೊಟ್ಟಿರುವ ಅದೇ ಅರ್ಥವನ್ನು ಹೊಂದಿರತಕ್ಕದ್ದು.