(1) ಈ ನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
1 "ಸರ್ಕಾರ" ಎಂದರೆ, ಕರ್ನಾಟಕ ಸರ್ಕಾರ;
2 "ಸರ್ಕಾರಿ ನೌಕರ” ಎಂದರೆ, ಕರ್ನಾಟಕ ರಾಜ್ಯದ ನಾಗರಿಕ ಸೇವಾ ಸದಸ್ಯನಾಗಿರುವ ಅಥವಾ ಕರ್ನಾಟಕ ರಾಜ್ಯದ ವ್ಯವಹಾರಗಳಿಗೆ ಸಂಬಂಧಪಟ್ಟ ನಾಗರಿಕ ಹುದ್ದೆಯನ್ನು ಧಾರಣ ಮಾಡಿರುವಂಥ ಯಾರೇ ವ್ಯಕ್ತಿ ಎಂದು ಅರ್ಥ ಹಾಗೂ ಅದು, ಯಾವ ವ್ಯಕ್ತಿಯ ಸೇವೆಗಳನ್ನು ತಾತ್ಕಾಲಿಕವಾಗಿ ಭಾರತ ಸರ್ಕಾರ, ಮತ್ತೊಂದು ರಾಜ್ಯ ಸರ್ಕಾರ, ಕಂಪನಿ, ನಿಗಮ, ನಿಗಮಿತವಾಗಿರುವ ಮಂಡಳಿ, AOA, ಅಥವಾ ನಿಗಮಿತವಾಗಿಲ್ಲದಿರುವ ಸ್ಮಳೀಯ ಪ್ರಾಧಿಕಾರದ ಸೇವೆಗೆ ನಿಯೋಜಿಸಲಾಗಿದೆಯೋ HOB ವ್ಯಕ್ತಿಯು ರಾಜ್ಯದ ಸಂಚಿತ ನಿಧಿಯ ಹೊರತಾದ ಇತರೆ ಯಾವುದೇ ಮೂಲಗಳಿಂದ ವೇತನ ಪಡೆದುಕೊಳ್ಳುತ್ತಿರುವುದು ಏನೇ ಇದ್ದರೂ, ಅಂ೦ಥ ವ್ಯಕ್ತಿಯನ್ನು ಒಳಗೊಳ್ಳುತ್ತದೆ;
ವಿವರಣೆ: ಈ ವಿಯಮಗಳಲ್ಲಿ ಉಲ್ಲೇಖಿಸಲಾಗಿರುವ “ಸರ್ಕಾರಿ ನೌಕರ” ಎಂದರೆ ಈ ನಿಯಮಗಳು ಅನ್ವಯವಾಗುವ ಯಾವುದೇ ವರ್ಗ ಅಥವಾ ಸೇವೆಗೆ ಸೇರಿದ ಅಧಿಕಾರಿ ಮತ್ತು ಸಿಬ್ಬಂದಿ. 3 ಸರ್ಕಾರಿ ನೌಕರನಿಗೆ ಸಂಬಂಧಪಟ್ಟಂ೦ತೆ "ಕುಟುಂಬದ ಸದಸ್ಯರು" ಎಂಬುದು: -
(i) ಸಂದರ್ಭಾನುಸಾರ ಸರ್ಕಾರಿ ನೌಕರನ/ ನೌಕರಳ ಪತ್ನಿಯು ಅಥವಾ ಪತಿಯು, ಸರ್ಕಾರಿ ನೌಕರನ/ನೌಕರಳ ಜೊತೆ ವಾಸವಾಗಿರಲಿ ಅಥವಾ ಇಲ್ಲದಿರಲಿ ಅವರನ್ನು ಒಳಗೊಳ್ಳುತ್ತದೆ. ಆದರೆ ಸಕ್ಷಮ ನ್ಯಾಯಾಲಯದ ಡಿಕ್ರಿಯ ಅಥವಾ ಆದೇಶದ ಮೂಲಕ ಸರ್ಕಾರಿ ನೌಕರನಿಂದ/ ನೌಕರಳಿಂದ ಬೇರ್ಪಟ್ಟಿರುವ ಸಂದರ್ಭಾನುಸಾರ ಪತ್ನಿ ಅಥವಾ ಪತಿಯನ್ನು ಒಳಗೊಳ್ಳುವುದಿಲ್ಲ.
(ii) ಸರ್ಕಾರಿ ನೌಕರನ ಮತ್ತು ಸಂಪೂರ್ಣವಾಗಿ ಆತನ ಮೇಲೆಯೇ ಅವಲಂಬಿಸಿರುವ ಮಗನನ್ನು ಅಥವಾ ಮಗಳನ್ನು ಅಥವಾ ಮಲ-ಮಗ ಅಥವಾ ಮಲ-ಮಗಳನ್ನು ಒಳಗೊಳ್ಳುತ್ತದೆ. ಆದರೆ ಸರ್ಕಾರಿ ನೌಕರನ ಮೇಲೆ ಯಾವುದೇ ರೀತಿಯಲ್ಲಿ ಅವಲಂ೦ಬಿಸಿರದ ಅಥವಾ ಯಾವುದೇ ಕಾನೂನಿನ ಮೂಲಕ ಅಥವಾ ಅದರ ಮೇರೆಗೆ ಯಾವ ಮಗುವಿನ ಅಥವಾ ಮಲ ಮಗುವಿನ ಅಭಿರಕ್ಕೆಯನ್ನು ಸರ್ಕಾರಿ ನೌಕರನಿಗೆ ನೀಡಲಾಗಿಲ್ಲವೋ ಆ ಮಗುವನ್ನು ಅಥವಾ ಮಲ-ಮಗುವನ್ನು ಒಳಗೊಳ್ಳುವುದಿಲ್ಲ;
(iii) ಸರ್ಕಾರಿನೌಕರನಿಗೆ ಅಥವಾ ಸರ್ಕಾರಿ ನೌಕರನ/ನೌಕರಳ ಪತ್ನಿಗೆ ಅಥವಾ ಪತಿಗೆ ರಕ್ತ ಸಂಬಂಧದ ಅಥವಾ ವಿವಾಹದ ಮೂಲಕ ಸಂಬಂಧಿಯಾದ ಪೂರ್ಣವಾಗಿ ಸರ್ಕಾರಿ ನೌಕರರನ್ನೇ ಅವಲಂಬಿಸಿರುವ ಯಾರೇ ಇತರ ವ್ಯಕ್ತಿಯನ್ನು ಒಳಗೊಳ್ಳುತ್ತದೆ;
4 "ನಿಯಮಿಸಿದ ಪ್ರಾಧಿಕಾರ” ಎಂದರೆ,-
(i) ಕರ್ನಾಟಕ ನ್ಯಾಯಿಕ ಸೇವೆಗೆ ಸೇರಿದ ವ್ಯಕ್ತಿಗಳ ಸಂದರ್ಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯ;
(ii). ಸಮೂಹ -ಎ ದರ್ಜೆಯ ಯಾವುದೇ ಹುದ್ದೆಯನ್ನು ಹೊಂದಿರುವ ಮತ್ತು ಸಮೂಹ - ಬಿ ಯಲ್ಲಿ ತಹಶೀಲ್ದಾರ್ ದರ್ಜಿ-। ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನ ಸಂಬಂಧದಲ್ಲಿ ಸರ್ಕಾರ;
(ii) ಸಮೂಹ - ಬಿಯಲ್ಲಿನ ತಹಶೀಲ್ದಾರ್ ದರ್ಜೆ-॥ ಅನ್ನು ಹೊರತುಪಡಿಸಿ, ಸಮೂಹ-ಬಿ, ಸಮೂಹ-ಸಿ ಹಾಗೂ ಸಮೂಹ-ಡಿ ಯಲ್ಲಿನ ಯಾವುದೇ ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನ ಸಂಬಂಧದಲ್ಲಿ ಇಲಾಖೆಯ ಮುಖ್ಯಸ್ಥ;
ಪರಂತು ಇಲಾಖಾ ಮುಖ್ಯಸ್ಥರು ಆದೇಶದ ಮೂಲಕ ತಮ್ಮ ಆಡಳಿತ ನಿಯಂತ್ರಣಕ್ಕೆ ಒಳಪಡುವ ಯಾವುದೇ ಇತರೆ ಪ್ರಾಧಿಕಾರಿಗಳನ್ನು ಈ ಖಂಡದ ಉದ್ದೇಶಕ್ಕಾಗಿ ವಿಯಮಿತ ಪ್ರಾಧಿಕಾರವೆಂದು ನಿರ್ದಿಷ್ಟಪಡಿಸಬಹುದು.
ವಿವರಣೆ.- ಅನ್ಯ ಸೇವೆಯ ಮೇಲಿರುವ ಅಥವಾ ಇತರ ಯಾವುದೇ ಇಲಾಖೆಗೆ ಅಥವಾ ಇತರ ಯಾವುದೇ ಸರ್ಕಾರಕ್ಕ ಪ್ರತಿನಿಯೋಜನೆಗೊಂಡಿರುವ, ಸರ್ಕಾರಿ ನೌಕರನ ಸಂದರ್ಭದಲ್ಲಿ, ಸಂದರ್ಭಾನುಸಾರ (0ನೇ ಉಪ-ಖಂಡ ಅಥವಾ (1ನೇ ಉಪ-ಖಂ೦ಡದಲ್ಲಿ ನಿರ್ದಿಷ್ಟಪಡಿಸಿದ ಪ್ರಾಧಿಕಾರಗಳೇ ನಿಯಮಿಸಿದ ಪ್ರಾಧಿಕಾರವಾಗಿರತಕ್ಕದ್ದು.
(iv) ಅಂಥ ಪ್ರಾಧಿಕಾರವನ್ನು ಸರ್ಕಾರವು ಆ ಬಗ್ಗೆ ಹೊರಡಿಸಲಾದ ಆದೇಶದ ಮೂಲಕ ಗೊತ್ತುಪಡಿಸತಕ್ಕದ್ದು.
ಈ ನಿಯಮಗಳ ವಿವಿಧ ಉಪಬಂಧಗಳ ಉದ್ದೇಶಕ್ಕಾಗಿ ವಿವಿಧ ಪ್ರಾಧಿಕಾರಿಗಳನ್ನು ನಿರ್ದಿಷ್ಟಪಡಿಸಬಹುದು.
(2) ಈ ನಿಯಮಗಳಲ್ಲಿ ಬಳಸಿದ ಆದರೆ ಪರಿಭಾಷಿಸಿರದ ಇನ್ನಿತರ ಎಲ್ಲಾ ಪದಗಳು ಮತ್ತು ಪದಾವಳಿಗಳು, ಕರ್ನಾಟಕ ನಾಗರಿಕ ಸೇವಾ ನಿಯಮಗಳಲ್ಲಿ ಅಥವಾ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978ರ (1990ರ ಕರ್ನಾಟಕ ಅಧಿನಿಯಮ 14) ಅಡಿಯಲ್ಲಿ ರಚಿಸಲಾದ ಅಥವಾ ರಚಿಸಲಾಗಿದೆಯೆಂದು ಭಾವಿಸಲಾದ ಯಾವುದೇ ಇತರ ನಿಯಮಗಳಲ್ಲಿ ಅವುಗಳಿಗೆ ನೀಡಲಾದ ಅರ್ಥವನ್ನೇ ಇವುಗಳಿಗೂ ನೀಡಲಾಗಿದೆ ಎಂದು ಭಾವಿಸತಕ್ಕದ್ದು.