(1) ಯಾರೇ ಸರ್ಕಾರಿ ನೌಕರನು, ಯಾವುದೇ ಕಂಪನಿಯಲ್ಲಿ ಅಥವಾ ಫರ್ಮ್ನಲ್ಲಿ ಅಥವಾ ಸಂಸ್ಥೆಯಲ್ಲಿ ತನ್ನ ಕುಟುಂಬದ ಯಾರೇ ಸದಸ್ಯವಿಗೆ ಉದ್ಯೋಗವನ್ನು ದೊರಕಿಸಿಕೊಡಲು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತನ್ನ ಸ್ಥಾನವನ್ನು ಅಥವಾ ಪ್ರಭಾವವನ್ನು ಬಳಸಿಕೊಳ್ಳತಕ್ಕದ್ದಲ್ಲ.
(2) () ಯಾರೇ ಎ-ದರ್ಜೆಯ ಅಧಿಕಾರಿಯು, ಸರ್ಕಾರದ ಪೂರ್ವ ಮಂ೦ಜೂರಾತಿ ಪಡೆದ ಹೊರತು ತನ್ನ ಮಗ, ಮಗಳು ಅಥವಾ ಇತರೆ ಯಾವುದೇ ಅವಲಂಬಿತರಿಗೆ ಆತನು ಅಧಿಕೃತ ವ್ಯವಹಾರವನ್ನು ಹೊಂದಿರುವ ಯಾವುದೇ ಕಂಪನಿಯಲ್ಲಿ ಅಥವಾ ಫರ್ಮ್ನಲ್ಲಿ ಅಥವಾ ಸಂಸ್ಥೆಯಲ್ಲಿ ಅಥವಾ ಸರ್ಕಾರದೊಂದಿಗೆ ಅಧಿಕೃತ ವ್ಯವಹಾರಗಳನ್ನು ಹೊಂದಿರುವ ಯಾವುದೇ ಇತರ ಉದ್ಯಮದಲ್ಲಿ ಉದ್ಯೋಗವನ್ನು ಒಪ್ಪಿಕೊಳ್ಳಲು ಅನುಮತಿ ನೀಡತಕ್ಕದ್ದಲ್ಲ:
ಪರಂತು, ಉದ್ಯೋಗವನ್ನು ಒಪ್ಪಿಕೊಳ್ಳಲು ಸರ್ಕಾರದ ಪೂರ್ವಾನುಮತಿ ಪಡೆಯುವುದಕ್ಕಾಗಿ ಕಾಯಲು ಸಾಧ್ಯವಿಲ್ಲದಿರುವಾಗ ಅಥವಾ ಅನ್ಯಥಾ ತುರ್ತು ಎಂದು ಪರಿಗಣಿಸಿರುವಾಗ ಸರ್ಕಾರಕ್ಕೆ ಈ ವಿಷಯದ ಬಗ್ಗೆ ವರದಿ ಮಾಡತಕ್ಕದ್ದು ಮತ್ತು ಸರ್ಕಾರದ ಅನುಮತಿಗೆ ಒಳಪಟ್ಟು, ತಾತ್ಕಾಲಿಕವಾಗಿ ಉದ್ಯೋಗವನ್ನು ಒಪ್ಪಿಕೊಳ್ಳಬಹುದು.
(ii) ಸರ್ಕಾರಿ ನೌಕರನು, ತನ್ನ ಕುಟುಂಬದ ಸದಸ್ಯನು ಯಾವುದೇ ಕಂಪನಿಯಲ್ಲಿ ಅಥವಾ ಫರ್ಮ್ನಲ್ಲಿ ಅಥವಾ ಸಂಸ್ಥೆಯಲ್ಲಿ ಉದ್ಯೋಗವನ್ನು ಒಪ್ಪಿಕೊಂಡಿದ್ದಾನೆ ಎಂಬುದು ತಿಳಿದ ಕೂಡಲೇ, ಹಾಗೆ... ಒಪ್ಪಿಕೊಂಡಿರುವುದನ್ನು ನಿಯಮಿಸಿದ ಪಾಾಧಿಕಾರಿಗೆ ತಿಳಿಸತಕ್ಕದ್ದು ಮತ್ತು ಆ ಕಂ೦ಪನಿಯೊಂದಿಗೆ ಅಥವಾ ಫರ್ಮ್ ಅಥವಾ ಸಂ೦ಸ್ಥೆಯೊಂದಿಗೆ ಆತನು ಯಾವುದೇ ಸರ್ಕಾರಿ ವ್ಯವಹಾರ ಹೊಂದಿರುವನೇ ಅಥವಾ ಹೊಂದಿದ್ದನೇ ಎಂಬುದನ್ನು ಸಹ ತಿಳಿಸತಕ್ಕದ್ದು:
BOOS), ಅಧಿಕಾರಿಯು ಈಗಾಗಲೇ ಸರ್ಕಾರದ ಮಂಜೂರಾತಿಯನ್ನು ಪಡೆದಿದ್ದರೆ ಅಥವಾ ಈ ಉಪ-ನಿಯಮದ (ನೇ ಖಂಡದ ಅಡಿಯಲ್ಲಿ ಆತನು ಸರ್ಕಾರಕ್ಕೆ ವರದಿ ಕಳುಹಿಸಿದ್ದರೆ, ಆ ಅಧಿಕಾರಿಯ ಸಂದರ್ಭದಲ್ಲಿ ಹಾಗೆ ತಿಳಿಸುವುದು ಅಗತ್ಯವಿರತಕ್ಕದ್ದಲ್ಲ.
(3) 0 ಯಾರೇ ಸರ್ಕಾರಿ ನೌಕರನು, ತನ್ನ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಾಗ ಯಾವುದೇ ಕಂಪನಿಯೊಂದಿಗೆ ಅಥವಾ ಫರ್ಮಿನೊಂ೦ದಿಗೆ ಅಥವಾ ಸಂಸ್ಮೆಯೊಂದಿಗೆ ಅಥವಾ ಯಾರೇ ಇತರ ವ್ಯಕ್ತಿಯೊಂದಿಗೆ, ತನ್ನ ಕುಟುಂಬದ ಯಾರೇ ಸದಸ್ಯನು ಆ ಕಂಪನಿಯಲ್ಲಿ ಅಥವಾ ಫರ್ಮಿನಲ್ಲಿ ಅಥವಾ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರೆ ಅಥವಾ ತಾನು ಅಥವಾ ತನ್ನ ಕುಟುಂಬದ ಯಾರೇ ಸದಸ್ಯನು ಅಂಥ ವಿಷಯದಲ್ಲಿ ಅಥವಾ ಕರಾರಿನಲ್ಲಿ ಯಾವುದೇ ಇತರ ರೀತಿಯಲ್ಲಿ ಹಿತಾಸಕ್ತಿ ಉಳ್ಳವನಾಗಿದ್ದರೆ, ಆ ಯಾವುದೇ ವಿಷಯದ ಬಗ್ಗೆ ಅಥವಾ ಅವುಗಳ ಪರವಾಗಿ ವ್ಯವಕಹರಿಸತಕ್ಕದ್ದಲ್ಲ ಅಥವಾ ಯಾವುದೇ ಕರಾರನ್ನು ನೀಡತಕ್ಕದ್ದಲ್ಲ ಅಥವಾ ಅದನ್ನು ಮಂಜೂರು ಮಾಡತಕ್ಕದ್ದಲ್ಲ.
(ii) ಈ ಉಪನಿಯಮದ (i)ನೇ ಖಂಡದಲ್ಲಿ ಉಲ್ಲೇಖಿಸಲಾದ ಸಂದರ್ಭದಲ್ಲಿ, ಸರ್ಕಾರಿ ನೌಕರನು ಅಂತಹ ಪ್ರತಿಯೊಂದು ವಿಷಯದ ಅಥವಾ ಕರಾರಿನ ಬಗ್ಗೆ ತನ್ನ ವರಿಷ್ಠಾಧಿಕಾರಿಗೆ ತಿಳಿಸತಕ್ಕದ್ದು ಮತ್ತು ಕರಾರಿನ ಬಗೆಗಿನ ಆ ವಿಷಯವನ್ನು, ಯಾವ ವರಿಷ್ಠಾಧಿಕಾರಿಗೆ ಅಥವಾ ಇತರ ಯಾವ ಪ್ರಾಧಿಕಾರಕ್ಕೆ ಆ ಬಗ್ಗೆ ತಿಳಿಸಲಾಗಿದೆಯೋ ಆ ಪ್ರಾಧಿಕಾರಿಯ ಸೂಚನೆಗನುಸಾರವಾಗಿ ಆ ತರುವಾಯ ಪ್ರಕರಣವನ್ನು ವಿಲೆ ಮಾಡತಕ್ಕದ್ದು. 5. ರಾಜಕೀಯದಲ್ಲಿ ಮತ್ತು ಚುನಾವಣೆಯಲ್ಲಿ ಭಾಗವಹಿಸುವುದು: (1) ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ.
(2) ಕಾನೂನಿನ ಮೂಲಕ ಸ್ಥಾಪಿತವಾದ ಸರ್ಕಾರವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಉರುಳಿಸುವಂಥದ್ದಾಗಿರುವ ಅಥವಾ ಉರುಳಿಸುವ ಉದ್ದೇಶ ಹೊಂ೦ದಿರುವ ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಯಾರೇ ಸದಸ್ಯನೂ ಭಾಗವಹಿಸದಂತೆ, ಅದರ ಸಹಾಯಾರ್ಥ ವಂತಿಗೆ ನೀಡದಂತೆ ಅಥವಾ ಇನ್ನಾವುದೇ ರೀತಿಯಿಂದ ನೆರವಾಗುವುದನ್ನು ತಡೆಗಟ್ಟಿಲು ಪ್ರಯತ್ನಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಕರ್ತವ್ಯವಾಗಿರತಕ್ಕದ್ದು ಮತ್ತು OOP ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಸದಸ್ಯರು ಭಾಗವಹಿಸುವುದನ್ನು, ವಂತಿಗೆ ನೀಡುವುದನ್ನು ಅಥವಾ ಬೇರೆ ರೀತಿಯಿಂದ ನೆರವು ನೀಡುವುದನ್ನು ತಡೆಗಟ್ಟಲು ಸರ್ಕಾರಿ ನೌಕರನಿಗೆ ಸಾಧ್ಯವಾಗದಿದ್ದರೆ, ಅವನು ಆ ವಿಷಯವನ್ನು ನಿಯಮಿಸಲಾದ ಪಾಧಿಕಾರಕ್ಕೆ ವರದಿ ಮಾಡತಕ್ಕದ್ದು.
(3) ಯಾವುದೇ ಒಂದು ಪಕ್ಷವು ರಾಜಕೀಯ ಪಕ್ಷವೇ ಅಥವಾ ಯಾವುದೇ ಸಂಘ ಸಂಸ್ಥೆಯು ರಾಜಕೀಯದಲ್ಲಿ ಭಾಗವಹಿಸುತ್ತಿದೆಯೇ ಅಥವಾ ಯಾವುದೇ ಚಳವಳಿಯು ಅಥವಾ ಚಟುವಟಿಕೆಯು (ಏನೇ ಉಪನಿಯಮದ ವ್ಯಾಪ್ತಿಯೊಳಗೆ ಬರುತ್ತದೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದಾಗ, ಆ ಕುರಿತು ಸರ್ಕಾರದ ತೀರ್ಮಾನವೇ ಅಂತಿಮವಾಗಿರತಕ್ಕದ್ದು.
(4) ಯಾರೇ ಸರ್ಕಾರಿ ನೌಕರನು ಸಂಸತ್ತು, ರಾಜ್ಯ ವಿಧಾನಮಂಡಲದ ಯಾವುದೇ ಸದನ ಅಥವಾ ಸ್ಥಳೀಯ ಪ್ರಾಧಿಕಾರದ ಚುನಾವಣೆಗಳಲ್ಲಿ ಪ್ರಚಾರ ಮಾಡತಕ್ಕದ್ದಲ್ಲ ಅಥವಾ ಅನ್ಯಥಾ ಹಸ್ತಕ್ಷೇಪ ಮಾಡತಕ್ಕದ್ದಲ್ಲ ಅಥವಾ ಆ ಸಂಬಂಧದಲ್ಲಿ ತನ್ನ ಪ್ರಭಾವವನ್ನು ಬೀರತಕ್ಕದ್ದಲ್ಲ ಅಥವಾ ಅದರಲ್ಲಿ ಭಾಗವಹಿಸತಕ್ಕದ್ದಲ್ಲ:
ಪರಂತು,-
(i) ಅಂಥ ಯಾವುದೇ ಚುನಾವಣೆಯಲ್ಲಿ ತನ್ನ ಮತವನ್ನು ಚಲಾಯಿಸಲು ಅರ್ಹನಾಗಿರುವ ಸರ್ಕಾರಿ ನೌಕರನು ಮತ ಹಾಕಲು ತನಗಿರುವ ಹಕ್ಕನ್ನು ಚಲಾಯಿಸಬಹುದು, ಆದರೆ ಆತನು ಹಾಗೆ ಮಾಡುವಾಗ, ಯಾವ ರೀತಿಯಲ್ಲಿ ತಾನು ಮತ ಹಾಕಲು ಉದ್ದೇಶಿಸಿದ್ದಾನೆ ಅಥವಾ ಮತ ಹಾಕಿದ್ದೇನೆ ಎಂಬ ಬಗ್ಗೆ ಯಾವುದೇ ಸೂಚನೆಯನ್ನು ನೀಡತಕ್ಕದ್ದಲ್ಲ ಹಾಗೂ ಯಾರಿಗೆ ಮತ ನೀಡಲು ಉದ್ದೇಶಿಸಿದ್ದೇನೆ ಅಥವಾ ಯಾರಿಗೆ ಮತ ನೀಡಿದ್ದೇನೆ ಎಂಬ ಬಗ್ಗೆ ಯಾವುದೇ ಸೂಚನೆಗಳನ್ನು ನೀಡತಕ್ಕದ್ದಲ್ಲ.
(ii) ಚುನಾವಣೆ ನಡೆಯುವಾಗ, ಸರ್ಕಾರಿ ನೌಕರನು ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ಅಥವಾ ಕಾನೂನಿನ ಮೇರೆಗೆ, ಆತನ ಮೇಲೆ ವಿಧಿಸಲಾಗಿರುವ ಕರ್ತವ್ಯದ ಯುಕ್ತ ನಿರ್ವಹಣೆಯಲ್ಲಿ, ಆತನು ನೆರವು ನೀಡುತ್ತಾನೆಂಬ ಏಕೈಕ ಕಾರಣಕ್ಕಾಗಿ ಈ ಉಪನಿಯಮದ ಉಪಬಂ೦ಧಗಳನ್ನು ಉಲ್ಲಂಫಿಸಿರುವನೆಂದು ಭಾವಿಸತಕ್ಕದ್ದಲ್ಲ.
ವಿವರಣೆ: ಸರ್ಕಾರಿ ನೌಕರನು ಯಾವುದೇ ಚುನಾವಣಾ ಚಿಹ್ನೆಯನ್ನು ತನ್ನ ಮೇಲೆ, ತನ್ನ ವಾಹನದ ಅಥವಾ ನಿವಾಸದ ಮೇಲೆ ಅಥವಾ ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸಿದರೆ, ಅವನು, ಈ ಉಪ-ನಿಯಮದ ಅರ್ಥವ್ಯಾಪ್ತಿಯೊಳಗೆ ಚುನಾವಣೆಗೆ ಸಂಬಂಧಿಸಿದಂತೆ ತನ್ನ ಪ್ರಭಾವವನ್ನು ಬೀರುತ್ತಿದ್ದಾನೆ ಎಂದು ಪರಿಗಣಿಸತಕ್ಕದ್ದು.