ಯಾರೇ ಸರ್ಕಾರಿ ನೌಕರನು,-
(i) ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯ, ದೇಶದ ಭದ್ರತೆಯ, ವಿದೇಶಿ ರಾಷ್ಟ್ರಗಳೊಂದಿಗಿನ ಸ್ನೇಹಯುತ ಸಂಬಂಧದ ಹಿತದೃಷ್ಟಿಗೆ, ಸಾರ್ವಜನಿಕ ಸುವ್ಯವಸ್ಥೆಗೆ, ಸಭ್ಯತೆಗೆ ಅಥವಾ ನೈತಿಕತೆಗೆ ಧಕ್ಕೆಯುಂಟು ಮಾಡುವ ಅಥವಾ ನ್ಯಾಯಾಲಯ ನಿಂದನೆಗೆ, ಮಾನಹಾವಿಗೆ ಅಥವಾ ಅಪರಾಧಕ್ಕೆ ಪ್ರಚೋದನೆ ನೀಡುವುದನ್ನು ಒಳಗೊಂಡಿರುವ ಯಾವುದೇ ಪ್ರದರ್ಶನದಲ್ಲಿ ತನ್ನನ್ನು ತೊಡಗಿಸಿಕೊಳ್ಳತಕ್ಕದ್ದಲ್ಲ ಅಥವಾ ಭಾಗವಹಿಸತಕ್ಕದ್ದಲ್ಲ.
(ii) ಎಷ್ಟೇ ಸಂಖ್ಯೆಯ ಸರ್ಕಾರಿ ನೌಕರರೊಡನೆ ಸೇರಿ ಯಾವುದೇ ಬಗೆಯ ಮುಷ್ಕರಕ್ಕೆ ತೊಡಗತಕ್ಕದ್ದಲ್ಲ ಅಥವಾ ಯಾವುದೇ ರೀತಿಯಲ್ಲಿ ಅದಕ್ಕೆ ಪ್ರೇರೇಪಣೆ ಮಾಡತಕ್ಕದ್ದಲ್ಲ. ಪ್ರಚೋದನೆ ಮಾಡತಕ್ಕದ್ದಲ್ಲ ಅಥವಾ ದುಷ್ಟೆೇರಣೆ ಮಾಡತಕ್ಕದ್ದಲ್ಲ.
ವಿವರಣೆ: ಈ ನಿಯಮದ ಉದ್ದೇಶಗಳಿಗಾಗಿ "ಮುಷ್ಕರ" ಎಂದರೆ (ಕರ್ತವ್ಯದಿಂದ ಅನಧಿಕೃತ ಗೈರುಹಾಜರಾಗುವುದೂ ಸೇರಿದಂತೆ) ಸರ್ಕಾರಿ ನೌಕರರ ಒಂದು ಗುಂಪು ಒಟ್ಟಾಗಿ ಸೇರಿಕೊಂಡು ಕೆಲಸ ಮಾಡುವುದನ್ನು ನಿಲ್ಲಿಸುವುದು ಅಥವಾ ನಿಧಾನಗತಿಯಲ್ಲಿ ಕೆಲಸ ಮಾಡುವುದು ಅಥವಾ ಎಷ್ಟೇ ಸಂಖ್ಯೆಯ ಸರ್ಕಾರಿ ನೌಕರರು ಒಟ್ಟಾಗಿ ಸೇರಿ ಅಥವಾ ತಮ್ಮ ತಮ್ಮಲ್ಲೇ ಮಾತನಾಡಿಕೊಂಡು ಕೆಲಸ ಮಾಡಲು ನಿರಾಕರಿಸುವುದು ಎಂದು ಅರ್ಥ.