ಯಾರೇ ಸರ್ಕಾರಿ ನೌಕರನು, ಆಕಾಶವಾಣಿ ಪ್ರಸಾರದಲ್ಲಾಗಲಿ ಅಥವಾ ದೂರದರ್ಶನದ ಕಾರ್ಯಕ್ರಮದಲ್ಲಾಗಲಿ ಅಥವಾ ಯಾವುದೇ ಸಾರ್ವಜನಿಕ ಮಾಧ್ಯಮದಲ್ಲಿ ವಾಸ್ತವ ಹೇಳಿಕೆ ಅಥವಾ ಅಭಿಪ್ರಾಯ ನೀಡುವುದಾಗಲಿ ಅವನ ಹೆಸರಿನಲ್ಲಿ ಅಥವಾ ಅನಾಮಧೇಯವಾಗಿ, ಗುಪ್ತನಾಮದಲ್ಲಿ ಅಥವಾ ಬೇರೊಬ್ಬನ ಹೆಸರಿನಲ್ಲಿ ಪ್ರಕಟಿಸಲಾದ ಇತರ ಯಾವುದೇ ದಸ್ತಾವೇಜಿನಲ್ಲಿ ಅಥವಾ ಪತ್ರಿಕೆಗೆ ಬರೆದ ಯಾವುದೇ ಪತ್ರದಲ್ಲಿ ಅಥವಾ ಯಾವುದೇ ಸಾರ್ವಜನಿಕ ಹೇಳಿಕೆಯಲ್ಲಿ,-
i) ಕರ್ನಾಟಕ ಸರ್ಕಾರದ ಅಥವಾ ಕೇಂದ್ರ ಸರ್ಕಾರದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರದ ಪ್ರಸ್ತುತ ಅಥವಾ ಇತ್ತೀಚಿನ ಯಾವುದೇ ನೀತಿಯ ಅಥವಾ ಕ್ರಮದ ಬಗ್ಗೆ ಪ್ರತಿಕೂಲ ಟೀಕೆಯ ಪರಿಣಾಮ ಹೊಂದಿರುವಂಥ ಯಾವುದೇ ಸಂಗತಿಗಳ ನಿರೂಪಣೆಯನ್ನು ಮಾಡತಕ್ಕದ್ದಲ್ಲ ಅಥವಾ ಅಭಿಪ್ರಾಯವನ್ನು ವ್ಯಕ್ತಪಡಿಸತಕ್ಕದ್ದಲ್ಲ:
ಪರಂತು, ಈ ಖಂಡದಲ್ಲಿ ಒಳಗೊಂಡಿರುವುದು ಯಾವುದೂ, ಸರ್ಕಾರಿ ನೌಕರನು, ಸರ್ಕಾರಿ ನೌಕರರ ಮಾನ್ಯತೆ ಪಡೆದ ಸಂಘದ ಅಥವಾ ಸಂಘದ ಪದಾಧಿಕಾರಿಯಾಗಿ GOP ಸರ್ಕಾರಿ ನೌಕರರ ಸೇವಾ ಸ್ಥಿತಿಗತಿ ರಕ್ಷಿಸುವ ಅಥವಾ ಅವುಗಳಲ್ಲಿ ಸುಧಾರಣೆಯನ್ನು ಸುವಿಶ್ಚಿತಗೊಳಿಸುವ ಉದ್ದೇಶಗಳಿಗಾಗಿ ವ್ಯಕ್ತಪಡಿಸಿದ ಪ್ರಾಮಾಣಿಕ ಅಭಿಪ್ರಾಯಗಳಿಗೆ ಅನ್ವಯಿಸತಕ್ಕದ್ದಲ್ಲ;
(ii) ಕರ್ನಾಟಕ ಸರ್ಕಾರದ ಮತ್ತು ಕೇಂದ್ರ ಸರ್ಕಾರದ ಅಥವಾ ಇತರ ಯಾವುದೇ ರಾಜ್ಯ ಸರ್ಕಾರದ ಅಥವಾ ಕೇಂದ್ರ ಸರ್ಕಾರದ ಮತ್ತು ಯಾವುದೇ ವಿದೇಶಿ ಸರ್ಕಾರದ ನಡುವಿನ ಸಂಬಂಧಗಳನ್ನು ಇಕ್ಕಟ್ಟೆಗೆ ಸಿಲುಕಿಸುವಂಂಥ ಯಾವುದೇ ಸಂಗತಿಗಳ ನಿರೂಪಣೆಯನ್ನು ಮಾಡತಕ್ಕದ್ದಲ್ಲ ಅಥವಾ ಅಭಿಪ್ರಾಯವನ್ನು ವ್ಯಕ್ತಪಡಿಸತಕ್ಕದ್ದಲ್ಲ;
BOOS, ಈ ನಿಯಮದಲ್ಲಿರುವುದು ಯಾವುದೂ, ಸರ್ಕಾರಿ ನೌಕರನು, ತನ್ನ ಪದೀಯ ಸಾಮರ್ಥ್ಯದಲ್ಲಿ ಅಥವಾ ತನಗೆ ವಹಿಸಲಾಗಿರುವ ಕರ್ತವ್ಯವನ್ನು ವಿಧ್ಯಕ್ಷವಾಗಿ ನಿರ್ವಹಿಸುವಾಗ ನೀಡಿದ ಯಾವುದೇ ಹೇಳಿಕೆಗೆ ಅಥವಾ ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ಅನ್ವಯವಾಗತಕ್ಕದ್ದಲ್ಲ. 12. ಸಮಿತಿ ಅಥವಾ ಇತರ ಯಾವುದೇ ಪ್ರಾಧಿಕಾರದ ಮುಂದೆ ಸಾಕ್ಷ್ಯ ನೀಡುವುದು: (1) ಉಪ-ನಿಯಮ 143ರಲ್ಲಿ ಉಪಬಂಧಿಸಿರುವುದನ್ನುಳಿದು, ಯಾರೇ ಸರ್ಕಾರಿ ನೌಕರನು, ನಿಯಮಿಸಲಾದ ಪ್ರಾಧಿಕಾರದ ಪೂರ್ವ ಮಂ೦ಜೂರಾತಿ ಪಡೆದ ಹೊರತು, ಯಾರೇ ವ್ಯಕ್ತಿಯು, ಸಮಿತಿಯು ಅಥವಾ ಪಾಧಿಕಾರವು ಮಾಡುವ ಯಾವುದೇ ವಿಚಾರಣೆಯ ಸಂಬಂಧದಲ್ಲಿ ಸಾಕ್ಷ್ಯ ನೀಡತಕ್ಕದ್ದಲ್ಲ.
(2) ಉಪ-ನಿಯಮ (1)ರ ಮೇರೆಗೆ ಯಾವುದೇ ಮಂಜೂರಾತಿ ನೀಡಿರುವಾಗ, ಅಂಥ ಸಾಕ್ಷ್ಯವನ್ನು ನೀಡುವ ಯಾರೇ ಸರ್ಕಾರಿ ನೌಕರನು ಕರ್ನಾಟಕ ಸರ್ಕಾರದ, ಕೇಂದ್ರ ಸರ್ಕಾರದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರದ ನೀತಿಯನ್ನು ಅಥವಾ ಕ್ರಮವನ್ನು ಟೀಕಿಸತಕ್ಕದ್ದಲ್ಲ.
(3) = ಈ ನಿಯಮದಲ್ಲಿರುವುದು ಯಾವುದೂ,-
(ಎ) ಕರ್ನಾಟಕ ಸರ್ಕಾರವು, ಕೇಂದ್ರ ಸರ್ಕಾರವು, ಸಂಸತ್ತು ಅಥವಾ ರಾಜ್ಯ ವಿಧಾನಮಂಂಡಲವು ನೇಮಕ ಮಾಡಿದ ಪ್ರಾಧಿಕಾರದ ಮುಂದೆ ವಿಚಾರಣೆಯಲ್ಲಿ ನೀಡಿದ ಸಾಕ್ಷ್ಯಕ್ಕೆ; ಅಥವಾ
(ಬಿ) — ಯಾವುದೇ ನ್ಯಾಯಿಕ ವಿಚಾರಣೆಯಲ್ಲಿ ನೀಡಿದ ಸಾಕ್ಷ್ಯಕ್ಕೆ; ಅಥವಾ (A) ಕರ್ನಾಟಕ ಸರ್ಕಾರದ ಅಥವಾ ಕೇಂದ್ರ ಸರ್ಕಾರದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪ್ರಾಧಿಕಾರವು ಆದೇಶ ಮಾಡಿರುವ ಇಲಾಖಾ ಖವಿಚಾರಣೆಯಲ್ಲಿ ನೀಡಿದ ಸಾಕ್ಷ್ಯಕ್ಕೆ - ಅನ್ವಯವಾಗತಕ್ಕದ್ದಲ್ಲ.
(4) ಉಪ-ನಿಯಮ 163ರಲ್ಲಿ ಉಲ್ಲೇಖಿಸಲಾದ ಸಾಕ್ಷ್ಯವನ್ನು ನೀಡಿರುವಂಥ ಯಾರೇ ಸರ್ಕಾರಿ ನೌಕರನು ಅಂಥ ಸಾಕ್ಷ್ಯಕ್ಕೆ ಪ್ರಚಾರ ನೀಡತಕ್ಕದ್ದಲ್ಲ.