ಪ್ರತಿಯೊಬ್ಬ ಸರ್ಕಾರಿ ನೌಕರನು ವಿಶ್ವಾಸಾರ್ಹತೆಯಿಂದ ಕೂಡಿದ ತನ್ನ ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಮಾಹಿತಿಯನ್ನು ಮಾಹಿತಿ ಹಕ್ಕು ಕಾಯ್ದೆ (2005 ಕೇಂದ್ರಿಯ ಕಾಯ್ದೆ 22) ಮತ್ತು ಅದರಡಿ ರಚಿಸಲಾದ ನಿಯಮಗಳನ್ವಯ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸಲು ಬದ್ಧರಾಗಿರುತ್ತಾರೆ:
ಪರಂತು, ಸರ್ಕಾರಿ ನೌಕರರು ಸರ್ಕಾರದ ಸಾಮಾನ್ಯ ಅಥವಾ ನಿರ್ದಿಷ್ಟ ಸೂಚನೆಗಳಿಲ್ಲದ ಹೊರತು ಅಥವಾ ತನ್ನ ಕರ್ತವ್ಯ ನಿರ್ವಹಣೆಯನ್ನು ವಿಶ್ವಾಸಾರ್ಹತೆಯಿಂದ ನಿರ್ವಹಿಸುವ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ವಿದ್ಯುನ್ಮಾನ ಸಾಧನ ಸೇರಿದಂತೆ ಯಾವುದೇ ಸಾಧನಗಳ ಮೂಲಕ ಕಛೇರಿಯ ಯಾವುದೇ ದಸ್ತಾವೇಜನ್ನು ಅಥವಾ ಅದರ ಭಾಗವನ್ನು ಅಥವಾ ರಹಸ್ಯ ಮಾಹಿತಿಯನ್ನು ನೀಡಲು ಅಧಿಕಾರ ಹೊಂದದೇ ಇದ್ದಲ್ಲಿ, ಅಂತಹ ಮಾಹಿತಿಯನ್ನು ಯಾವುದೇ ಸರ್ಕಾರಿ ನೌಕರರಿಗೆ ಅಥವಾ ಯಾವುದೇ ವ್ಯಕ್ತಿಗೆ ನೀಡುವಂತಿಲ್ಲ.