(1) ರಾಜ್ಯ ಸರ್ಕಾರವು, ಈ ಅಧ್ಯಾದೇಶದ ಪ್ರಾರಂಭದ ತರುವಾಯ ಸಾಧ್ಯವಾದಷ್ಟು ಬೇಗನೆ ಈ ಅಧ್ಯಾದೇಶದಿಂದ ಅಥವಾ ಅದರ ಅಡಿಯಲ್ಲಿ ವಹಿಸಿಕೊಡಲಾದ ಅಧಿಕಾರಗಳು ಮತ್ತು ಪ್ರಕಾರ್ಯಗಳನ್ನು ನಿರ್ವಹಿಸಲು, ಬೆಂಗಳೂರಿನಲ್ಲಿ ತನ್ನ ಕೇಂದ್ರ ಕಛೇರಿಯನ್ನು ಹೊಂದಿರುವ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಎಂದು ಕರೆಯಲಾಗುವ ಒಂದು ನಿಕಾಯವನ್ನು ರಚಿಸತಕ್ಕದ್ದು.
(2) ಆಯೋಗವು ಈ ಮುಂದಿನ ಸದಸ್ಯರುಗಳನ್ನು ಹೊಂದಿರತಕ್ಕದ್ದು ಎಂದರೆ,-
(ಎ) ರಾಜ್ಯ ಸರ್ಕಾರದಿಂದ ನಾಮನಿರ್ದೆೇಶಿತನಾದ, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ವಿಶೇಷ ಜ್ಞಾನವುಳ್ಳ ಒಬ್ಬ ಅಧ್ಯಕ್ಷ;
(ಬಿ) ರಾಜ್ಯ ಸರ್ಕಾರದಿಂದ ನಾಮನಿರ್ದೆೇಶಿತನಾದ, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ವಿಶೇಷ ಜ್ಞಾನವುಳ್ಳ ಇಬ್ಬರು ವ್ಯಕ್ತಿಗಳು;
(ಸಿ) ನಿರ್ದೇಶಕರು, ಸಮಾಜಕಲ್ಯಾಣ ಅಥವಾ ನಿರ್ದೇಶಕರು, ಬುಡಕಟ್ಟು ಕಲ್ಯಾಣ - ಇವರು ಅನುಕ್ರಮವಾಗಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ವಿಷಯಗಳಿಗೆ ಸಂಬಂಧಿಸಿದಂತೆ, ಆಯೋಗದ ಸದಸ್ಯ ಕಾರ್ಯದರ್ಶಿಗಳಾಗಿರತಕ್ಕದ್ದು.