ಆಯೋಗದ ಅಧ್ಯಕ್ಷ, ಸದಸ್ಯರು ಮತ್ತು ನೌಕರರನ್ನು ಭಾರತ ದಂಡ ಸಂಹಿತೆಯ (1860ರ ಕೇಂದ್ರಾಧಿನಿಯಮ 45) 21ನೇ ಪ್ರಕರಣದ ಅರ್ಥವ್ಯಾಪ್ತಿಯೊಳಗೆ ಲೋಕ ನೌಕರರೆಂಬುದಾಗಿ ಭಾವಿಸತಕ್ಕದ್ದು.
(1) ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯ ಪತ್ರದಲ್ಲಿ ಅಧಿಸೂಚನೆಯ ಪೂರ್ವ ಪ್ರಕಟಣೆಯ ತರುವಾಯ ಈ ಅಧ್ಯಾದೇಶದ ಉಪಬಂಧಗಳನ್ನು ನೆರವೇರಿಸುವ ಉದ್ದೇಶಗಳಿಗಾಗಿ ನಿಯಮಗಳನ್ನು ರಚಿಸಬಹುದು.
(2) ವಿಶೇಷವಾಗಿ ಮತ್ತು ಮೇಲೆ ತಿಳಿಸಿದ ಉಪಬಂಧಗಳ ಸಾಮಾಕ್ಯತೆಗೆ ಪ್ರತಿಕೂಲವಾಗದಂತೆ ಅಂಥ ನಿಯಮಗಳು ಈ ಮುಂದಿನ ಎಲ್ಲ ಅಥವಾ ಯಾವುದೇ ವಿಷಯದ ಬಗ್ಗೆ ಉಪಬಂಧ ಕಲ್ಪಿಸಬಹುದು, ಎಂದರೆ:-
(ಎ) 4ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ಅಧ್ಯಕ್ಷರಿಗೆ ಸಂದಾಯಮಾಡಬಹುದಾದ ವೇತನಗಳು ಮತ್ತು ಭತ್ಯೆಗಳು ಹಾಗೂ ಇತರ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಮತ್ತು ಸದಸ್ಯರಿಗೆ ಸಂದಾಯ ಮಾಡಬಹುದಾದ ಭತ್ಯೆಗಳು;
(ಬಿ) 12ನೇ ಪ್ರಕರಣದ (2)ನೇ ಉಪ ಪ್ರಕರಣದ ಅಡಿಯಲ್ಲಿ ತಯಾರಿಸತಕ್ಕ ಲೆಕ್ಕ ಪತ್ರಗಳ ವಾರ್ಷಿಕ ವಿವರದ ನಮೂನೆ;
(ಸಿ) ನಿಯಮಿಸಬೇಕೆಂದು ಅಗತ್ಯಪಡಿಸಲಾದ ಅಥವಾ ನಿಯಮಿಸಬಹುದಾದ ಯಾವುದೇ ಇತರ ವಿಷಯ.
(3) ಈ ಅಧ್ಯಾದೇಶದ ಮೇರೆಗೆ ರಚಿಸಲಾದ ಪ್ರತಿಯೊಂದು ನಿಯಮವನ್ನು ಅದನ್ನು ರಚಿಸಿದ ತರುವಾಯ ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಪ್ರತಿಯೊಂದು ಸದನದ ಮುಂದೆ ಅದು ಅಧಿವೇಶನದಲ್ಲಿರುವಾಗ, ಒಂದು ಅಧಿವೇಶನದಲ್ಲಿ ಅಥವಾ ಒಂದಾದ ಮೇಲೊಂದರಂತೆ ಬರುವ ಎರಡು ಅಥವಾ ಹೆಚ್ಚು ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಮಂಡಿಸತಕ್ಕದ್ದು ಮತ್ತು ಅದನ್ನು ಹಾಗೆ ಮಂಡಿಸಿದ ಅಧಿವೇಶನದ ಅಥವಾ ನಿಕಟ ತರುವಾಯ ಅಧಿವೇಶನಗಳ ಮುಕ್ತಾಯಕ್ಕೆ ಮುಂಚೆ, ಆ ನಿಯಮದಲ್ಲಿ ಯಾವುದೇ ಮಾರ್ಪಾಟನ್ನು ಮಾಡಬೇಕೆಂದು ಎರಡೂ ಸದನಗಳು ಒಪ್ಪಿದರೆ ಅಥವಾ ಆ ನಿಯಮವನ್ನು ಮಾಡಕೂಡದೆಂದು ಎರಡೂ ಸದನಗಳು ಒಪ್ಪಿದರೆ, ಆ ತರುವಾಯ ಆ ನಿಯಮುವು ಹಾಗೆ ಮಾರ್ಪಾಟು ಹೊಂದಿದ ರೂಪದಲ್ಲಿ ಮಾತ್ರವೇ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರ ಪರಿಣಾಮಕಾರಿಯಾಗತಕ್ಕದ್ದಲ್ಲ; ಆದಾಗ್ಯೂ ಅಂಥ ಯಾವುದೇ ಮಾರ್ಪಾಟು ಅಥವಾ ರದ್ದಿಯಾತಿಯು ಆ ನಿಯಮದ ಮೇರೆಗೆ ತತ್ಪೂರ್ವದಲ್ಲಿ ಮಾಡಲಾದ ಯಾವುದೇ ಕಾರ್ಯದ ಸಿಂಧುತ್ವಕ್ಕೆ ಪ್ರತಿಕೂಲ ಪರಿಣಾಮವನ್ನುಂಟು ಮಾಡತಕ್ಕದ್ದಲ್ಲ.