/Translated copy/
ಕರ್ನಾಟಕ ಸರ್ಕಾರ
ಸಂಖ್ಯೆ: ಆರ್ಡಿ 41 ಎಲ್ಜಿಪಿ 2022
ಕರ್ನಾಟಕ ಸರ್ಕಾರ ಸಚಿವಾಲಯ,
ಬಹುಮಹಡಿಗಳ ಕಟ್ಟಡ,
ಬೆಂಗಳೂರು, ದಿನಾಂಕ:16.01.2024
ಅಧಿಸೂಚನೆ
ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ರ 197ನೇ ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ಮತ್ತಷ್ಟು ತಿದ್ದುಪಡಿ ಮಾಡಲು ಈ ಮುಂದಿನ ನಿಯಮಗಳ ಕರಡನ್ನು ಕರ್ನಾಟಕ ರಾಜ್ಯಪತ್ರ ದಿನಾಂಕ:13.12.2023ರ ಭಾಗ IV-ಎ ರಲ್ಲಿ ಅಧಿಸೂಚನೆ ಸಂಖ್ಯೆ ಆರ್ಡಿ 41 ಎಲ್ಜಿಪಿ 2022, ದಿನಾಂಕ:28.11.2023ರ ಮೂಲಕ ಪ್ರಕಟಿಸಿದ್ದು, ಅಧಿಕೃತ ರಾಜ್ಯಪತ್ರದಲ್ಲಿ ಅವುಗಳ ಪ್ರಕಟಣೆಯ ದಿನಾಂಕದಿಂದ ಈ ಮೂಲಕ ಭಾದಿತರಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಹದಿನೈದು ದಿನಗಳೊಳಗೆ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಆಹ್ವಾನಿಸಿದ್ದರಿಂದಾಗಿ;
ಮತ್ತು ಸದರಿ ರಾಜ್ಯಪತ್ರವು ಸಾರ್ವಜನಿಕರಿಗೆ ದಿನಾಂಕ:13.12.2023ರಂದು ಲಭ್ಯವಾಗುವಂತೆ ಮಾಡಿರುವುದರಿಂದ;.
ಮತ್ತು ಮೇಲೆ ನಿರ್ದಿಷ್ಟಪಡಿಸಿದ ಅವಧಿಯೊಳಗೆ ರಾಜ್ಯ ಸರ್ಕಾರವು ಯಾವುದೇ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸದೇ ಇರುವುದರಿಂದಾಗಿ.
ಪ್ರಸ್ತುತ, ಆದ್ದರಿಂದ, ಕರ್ನಾಟಕ ಭೂಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ರ 197ನೇ ಪ್ರಕರಣದ 1ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ನ್ನು ತಿದ್ದುಪಡಿಮಾಡಲು ಈ ಮುಂದಿನ ನಿಯಮಗಳನ್ನು ರಚಿಸುತ್ತದೆ, ಎಂದರೆ :-
ನಿಯಮಗಳು