(1) ಈ ನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
(ಎ) “ಅಧಿನಿಯಮ: ಎಂದರೆ, ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ಅಧಿನಿಯಮ, 2017 (2018 ರ ಕರ್ನಾಟಕ ಅಧಿನಿಯಮ 03);
(ಬಿ) “ಹಣಕಾಸು ವರ್ಷ” ಎಂದರೆ, ಪ್ರತಿವರ್ಷ ಏಪ್ರಿಲ್ 1ನೇ ದಿನಾಂಕದಿಂದ ಪ್ರಾರಂಭವಾಗಿ ಮಾರ್ಚ್ 31 ನೇ ದಿನಾಂಕಕ್ಕೆ ಕೊನೆಗೊಳ್ಳುವ ಒಂದು ವರ್ಷದ ಅವಧಿ;
(ಸಿ) “ಪ್ರಪತ್ರ” ಎಂದರೆ, ಈ ನಿಯಮಗಳಿಗೆ ಅನುಬಂಧಿಸಲಾದ ಪ್ರಪತ್ರ;
(ಡಿ) “ಪ್ರಕರಣ” ಎಂದರೆ ಅಧಿನಿಯಮದ ಪ್ರಕರಣ;
(2) ಇದರಲ್ಲಿ ಉಪಯೋಗಿಸಲಾದ ಆದರೆ ಪರಿಭಾಷಿಸದೇ ಇರುವ ಎಲ್ಲಾ ಇತರ ಪದಗಳು ಮತ್ತು ಅಭಿವ್ಯಕ್ತಿಗಳು ಅಧಿನಿಯಮದಲ್ಲಿ ಅವುಗಳಿಗೆ ಅನುಕ್ರಮವಾಗಿ ನೀಡಲಾದಂತದೇ ಅರ್ಥವನ್ನು ಹೊಂದಿರತಕ್ಕದ್ದು.