(1) ಪ್ರಾಧಿಕಾರದ ಸಭೆ: ಉಪ ಸಮಿತಿ ಸಭೆಗಳಿಗೆ ಹಾಜರಾಗುವುದಕ್ಕೆ ಆಗಿಂದಾಗ್ಗೆ ಸರ್ಕಾರವು ಅಧಿಕಾರೇತರ ಸದಸ್ಯರಿಗೆ ಅನುಮತಿಸಬಹುದಾದಂಥ ದರದಲ್ಲಿ ಪ್ರಯಾಣ ಭತ್ಯೆಯನ್ನು ಮತ್ತು ಉಪಸ್ಥಿತಿ ಭತ್ಯೆಯನ್ನು ಪಡೆಯಲು ಹಕ್ಕುಳ್ಳವರಾಗಿರುತ್ತಾರೆ.
(2) ಪ್ರಕರಣ 13ರ ಅನ್ವಯ ನಡೆದುಕೊಂಡ ತಜ್ಞರ ಸೇವೆಗಾಗಿ ಅವರಿಗೆ ಸಂದಾಯ ಮಾಡತಕ್ಕ ಭತ್ಯೆಗಳು ಪ್ರಾಧಿಕಾರದ ಸದಸ್ಯರಿಗೆ ಸಂದಾಯ ಮಾಡತಕ್ಕಂಥದರಲ್ಲಿರತಕ್ಕದ್ದು ಮತ್ತು ಅವರಿಗೆ ಸಂದಾಯವಾಗತಕ್ಕಂತಹ ಗೌರವಧನ ಆಗಿಂದಾಗ್ಗೆ ಪ್ರಾಧಿಕಾರವು ನಿಗಧಿಪಡಿಸಬಹುದಾದಂತಹ ದರದಲ್ಲಿರತಕ್ಕದ್ದು. 5. ಕಾರ್ಯದರ್ಶಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು: (1) ಕಾರ್ಯದರ್ಶಿಯನ್ನು ತತ್ಕಾಲದಲ್ಲಿ ಜಾರಿಯಲ್ಲಿರುವ ಅಧಿನಿಯಮ ಅಥವಾ ಯಾವುದೇ ಕಾನೂನಿನಿಂದ ಅಥವಾ ಮೇರೆಗೆ ತನಗೆ ಪ್ರದತ್ತವಾದ ಅಥವಾ ವಹಿಸಿಕೊಡಲಾದಂಥ ಅಧಿಕಾರಗಳನ್ನು ಚಲಾಯಿಸುವುದರ ಜೊತೆಗೆ ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸುವುದರ ಜೊತೆಗೆ-
(ಎ) ಪ್ರಾಧಿಕಾರದ ಪ್ರತಿಯೊಂದು ಸಭೆ ಮತ್ತು ಉಪಸಭೆಗೆ ಹಾಜರಾಗಲು ಮತ್ತು ವ್ಯವಹರಣೆಯಲ್ಲಿ ಭಾಗಿಯಾಗಲು ಹಕ್ಕುಳ್ಳವನಾಗಿರತಕ್ಕದ್ದು, ಆದರೆ ಮತ ನೀಡುವುದಕ್ಕೆ ಹಕ್ಕುಳ್ಳವನಾಗಿರತದ್ದುದ್ದಲ್ಲ.
(ಬಿ) ಪ್ರಾಧಿಕಾರದ ಪ್ರತಿಯೊಂದು ಸಭೆಯ ನಡವಳಿಕೆಯ ಸಂಕ್ಷಿಪ್ತ ದಾಖಲೆಯನ್ನು ದಾಖಲು ಮಾಡತಕ್ಕುದು ಅಥವಾ ದಾಖಲು ಮಾಡುವಂತೆ ಮಾಡತಕ್ಕದ್ದು.
(ಸಿ) ಸಭೆಯಲ್ಲಿ ಮಂಡಿಸಲಾದ ಅಥವಾ ಯಾವುದೇ ಗೊತ್ತುವಳಿ ಅಥವಾ ಎತ್ತಲಾದ ಪ್ರಶ್ನೆಗಳ ಸಂಬಂಧದಲ್ಲಿ ತಮ್ಮ ಅಭಿಪ್ರಾಯವನ್ನು ಅಥವಾ ಯಾವುದೇ ಸ್ಪಷ್ಟೀಕರಣವನ್ನು ಒದಗಿಸತಕ್ಕದ್ದು;
(ಡಿ) ಪ್ರಾಧಿಕಾರದ ಎಲ್ಲ ಗೊತ್ತುವಳಿಗಳು ಮತ್ತು ಆದೇಶಗಳನ್ನು ಜಾರಿಗೊಳಿಸತಕ್ಕದ್ದು.
ಆದರೆ ಗೊತ್ತುವಳಿಗಳು ಅಥವಾ ಆದೇಶಗಳನ್ನು ಜಾರಿಗೆ ತರುವಲ್ಲಿ ಇಲ್ಲಿ ತೊಂದರೆಗಳು ಇರುತ್ತಮೋ ಅಲ್ಲಿ ಅದನ್ನು ಪ್ರಾಧಿಕಾರಕ್ಕೆ ಅದರ ಮುಂದಿನ ಸಭೆಯಲ್ಲಿ ವರದಿ ಮಾಡತಕ್ಕದ್ದು ಮತ್ತು ಪ್ರಾಧಿಕಾರದ ನಿರ್ದೇಶನಗಳಿಗನುಸಾರವಾಗಿ ನಡೆಯತಕ್ಕದ್ದು;
(ಇ) ಪ್ರಾಧಿಕಾರದ ಎಲ್ಲ ಅಧಿಕಾರಿಗಳ ಮತ್ತು ಸಿಬ್ಬಂದಿ ಮೇಲ್ವಿಚಾರಣೆ ಮತ್ತು ನಿಯಂತ್ರಣ ಹೊಂದಿರತಕ್ಕದ್ದು.
(ಎಫ್) ಪ್ರಾಧಿಕಾರದ ಸಭೆಯ ವ್ಯವಹರಣೆಗಳಿಗೆ ಸಂಬಂಧಿಸಿದ ಎಲ್ಲಾ ಕಾಗದ ಪತ್ರಗಳು ಮತ್ತು ಪ್ರಾಧಿಕಾರದ ಮೇರೆಗೆ ಅಥವಾ ಅವರ ಸ್ವಂತ ಅಧಿಕಾರದ ಮೇರೆಗೆ ನಡೆಸಿದ ಪತ್ರ ವ್ಯವಹಾರಗಳ ಅಭಿರಕ್ಷಣೆಯನ್ನು ಹೊಂದಿರತಕ್ಕದ್ದು;