ಮೇಲ್ಕಂಡ ನಿಯಮದಲ್ಲಿ ಏನೇ ಒಳಗೊಂಡಿದ್ದರೂ, ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಹೊರತು, ಆಯ್ಕೆಗೆ ಅರ್ಹರಾಗತಕ್ಕದ್ದಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರತಕ್ಕದ್ದು. ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು ಎಸ್ಎಸ್ಎಲ್ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸತಕ್ಕದ್ದು.
Loading…