ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಸಿಆಸುಇ 01 ಸೆನನಿ 2000 (ಭಾಗ-3), ಬೆಂಗಳೂರು, ದಿನಾಂಕ: 30ನೇ ಜನವರಿ 2001
2000ದ ಕರ್ನಾಟಕ ಗ್ರಾಮೀಣ ಅಭ್ಯರ್ಥಿಗಳಿಗಾಗಿ (ರಾಜ್ಯ ಸಿವಿಲ್ ಸೇವೆಗಳಲ್ಲಿ) ನೇಮಕಾತಿಗಳ ಅಥವಾ ಹುದ್ದೆಗಳ ಮೀಸಲಾತಿ ಅಧಿನಿಯಮ (2001ನೇ ಕರ್ನಾಟಕ ಅಧಿನಿಯಮ ಸಂಖ್ಯೆ. 1) ದ 1ನೇ ಪ್ರಕರಣದ (2)ನೇ ಉಪ ಪ್ರಕರಣದಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು, ದಿನಾಂಕ: 30-01-2001 ದಿನಾಂಕವನ್ನು ಸದರಿ ಅಧಿನಿಯಮದ ಎಲ್ಲಾ ಉಪಬಂಧಗಳು ಜಾರಿಯಲ್ಲಿ ಬರತಕ್ಕ ದಿನಾಂಕವೆಂದು ಈ ಮೂಲಕ ಗೊತ್ತುಪಡಿಸಿದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಎಸ್. ಚಂದ್ರಶೇಖರಪ್ಪ,
ಸರ್ಕಾರದ ಅಧೀನ ಕಾರ್ಯದರ್ಶಿ-1,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು)