(1) ಈ ನಿಯಮಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಪೌರಕಾರ್ಮಿಕರ ನೇಮಕಾತಿ) (ವಿಶೇಷ) ನಿಯಮಗಳು, 2017 ಎಂದು ಕರೆಯತಕ್ಕದ್ದು.
(2) ಈ ನಿಯಮವು ಸರ್ಕಾರಿ ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
(3) ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977ರಲ್ಲಿ ಅಥವಾ ಬೆಂಗಳೂರು ನಗರದ ನಗರಪಾಲಿಕೆಗಳ ಸೇವೆಗಳು (ಸಾಮಾನ್ಯ) ವೃಂದ ಮತ್ತು ನೇಮಕಾತಿ ನಿಯಮಗಳು, 1971ರಲ್ಲಿ ಅಥವಾ ಕರ್ನಾಟಕ ರಾಜ್ಯ ನಾಗರೀಕ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14) ಹಾಗೂ ಕರ್ನಾಟಕ ನಗರಪಾಲಿಕೆಗಳ ಅಧಿನಿಯಮ, 1976 (1977ರ ಕರ್ನಾಟಕ ಅಧಿನಿಯಮ 14)ರ ಅಡಿಯಲ್ಲಿ ಮಾಡಲಾಗಿರುವ ಅಥವಾ ಮಾಡಲಾಗಿದೆ ಎಂದು ಭಾವಿಸಲಾಗಿರುವ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗಳ ಪ್ರವರ್ಗಗಳಿಗೆ ಸಂಬಂಧಿಸಿದ ಇತರ ಯಾವುದೇ ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ, ಈ ನಿಯಮಗಳ ಉಪಬಂಧಗಳು, ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದಂತೆ ನಗರಪಾಲಿಕೆಗಳ ಖಾಲಿ ಸ್ಥಾನಗಳಿಗೆ 4000 ಹುದ್ದೆಗಳ ನೇರ ನೇಮಕಾತಿಯ ನೇಮಕಾತಿಗೆ ಅನ್ವಯವಾಗತಕ್ಕದ್ದು.
ಪರಂತು, ಈ ನಿಯಮಗಳು ಒಂದಕ್ಕಿಂತ ಹೆಚ್ಚಿನ ನೇಮಕಾತಿಗೆ ಅನ್ವಯವಾಗತಕ್ಕದ್ದಲ್ಲ.