(1) ಈ ನಿಯಮಗಳನ್ನು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ನಿಯಮಗಳು, 2021 ಎಂದು ಕರೆಯತಕ್ಕದ್ದು.
(2) ಈ ನಿಯಮಗಳ ಉಪಬಂಧಗಳು, ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಲಾದಂತೆ ತಾಂತ್ರಿಕ ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿಗೆ ಅನ್ವಯವಾಗತಕ್ಕದ್ದು.
(3) ಈ ನಿಯಮಗಳು, ಅಧಿಕೃತ ರಾಜ್ಯಪತ್ರದಲ್ಲಿ ಅವುಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.