ಕರ್ನಾಟಕ ಸರ್ಕಾರ
ಸಂಖ್ಯೆ: ಆಇ 9 ಪಿಇಎಸ್ 2022
ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನ ಸೌಧ,
ಬೆಂಗಳೂರು, ದಿನಾಂಕ:16 ಆಗಸ್ಟ್ 2024
ಅಧಿಸೂಚನೆ–I
ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967 ಅನ್ನು ತಿದ್ದುಪಡಿ ಮಾಡುವ ಕರಡನ್ನು, ಕರ್ನಾಟಕ ಅಬಕಾರಿ ಅಧಿನಿಯಮ, 1965 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21) ರ 71ನೇ ಪ್ರಕರಣದ (1)ನೇ ಉಪ–ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಅಧಿಸೂಚನೆ–I ಸಂಖ್ಯೆ:ಆಇ 09 ಪಿಇಎಸ್ 2022ರ ದಿನಾಂಕ:09.01.2023ನ್ನು ಕರ್ನಾಟಕ ರಾಜ್ಯಪತ್ರ (ವಿಶೇಷ) ಭಾಗ–IV ಎ ಸಂಖ್ಯೆ: 09, ದಿನಾಂಕ:10.01.2023ರಲ್ಲಿ ಅವುಗಳನ್ನು ಪ್ರಕಟಿಸಿದ ಮೂವತ್ತು ದಿನಗಳೊಳಗಾಗಿ, ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿ ಪ್ರಕಟಿಸಿರುವುದರಿಂದ.
ಮತ್ತು, ಸದರಿ ರಾಜ್ಯಪತ್ರವನ್ನು 10ನೇ ಜನವರಿ, 2023 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ.
ಮತ್ತು, ಸದರಿ ಕರಡಿಗೆ ಸಂಬಂಧಿಸಿದಂತೆ ಸ್ವೀಕರಿಸಿರುವ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುವುದರಿಂದ.
ಈಗ, ಆದ್ದರಿಂದ, ಕರ್ನಾಟಕ ಅಬಕಾರಿ ಅಧಿನಿಯಮ, 1965 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21)ರ 71ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಈ ಮೂಲಕ ಮುಂದಿನ ನಿಯಮಗಳನ್ನು ರಚಿಸುತ್ತದೆ, ಎಂದರೆ:–
ನಿಯಮಗಳು