(1) ಈ ನಿಯಮಗಳನ್ನು ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಮತ್ತು ನಿಯಂತ್ರಣ) ನಿಯಮಗಳು, 2012 ಎಂದು ಕರೆಯತಕ್ಕದ್ದು.
(2) ಅವು ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಮತ್ತು ನಿಯಂತ್ರಣ) ನಿಯಮಗಳು, 2012, Water Resources Department
2012 · PDF page 1
Hover any section to copy its link or text, ask Copilot about it, or bookmark it.
(1) ಈ ನಿಯಮಗಳಲ್ಲಿ ಅನ್ಯಥಾ ಅಗತ್ಯಪಡಿಸಿದ ಹೊರತು;
(ಎ) “ಅಧಿನಿಯಮ” ಎಂದರೆ, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಮತ್ತು ನಿಯಂತ್ರಣ) ಅಧಿನಿಯಮ, 2011 (2011 ರ ಕರ್ನಾಟಕ ಅಧಿನಿಯಮ ಸಂಖ್ಯೆ 25)
(ಬಿ) "ನಮೂನೆ" ಎಂದರೆ ಈ ನಿಯಮಗಳಿಗೆ ಅನುಬಂಧಿಸಲಾದ ನಮೂನೆ;
(ಸಿ) "ಅನುಸೂಚಿ" ಎಂದರೆ ಈ ನಿಯಮಗಳಿಗೆ ಅನುಬಂಧಿಸಲಾದ ಅನುಸೂಚಿ.
(2) ಈ ನಿಯಮಗಳಲ್ಲಿ ಬಳಸಿರುವ ಆದರೆ ಪರಿಭಾಷಿಸಿರದ ಪದಗಳು ಮತ್ತು ಪದಾವಳಿಗಳು ಅಧಿನಿಯಮದಲ್ಲಿ ಅವುಗಳಿಗೆ ಕೊಟ್ಟಿರುವ ಅದೇ ಅರ್ಥವನ್ನು ಹೊಂದಿರತಕ್ಕದ್ದು.
5ನೇ ಪ್ರಕರಣದ ಅಡಿಯಲ್ಲಿ ಅಧಿಕಾರೇತರ ಸದಸ್ಯರ ಮರು ನೇಮಕಾತಿಗಾಗಿ ಷರತ್ತುಗಳು ಈ ಮುಂದಿನಂತಿರತಕ್ಕದ್ದು:-
(1) ಅವರನ್ನು ಪ್ರಾಧಿಕಾರಕ್ಕೆ ಸದಸ್ಯರನ್ನಾಗಿ ನೇಮಕ ಮಾಡಿರುವುದನ್ನು 4ನೇ ಪ್ರಕರಣದ ಅಡಿಯಲ್ಲಿ ಅನರ್ಹಗೊಳಿಸತಕ್ಕದ್ದಲ್ಲ.
(2) ಅವರನ್ನು 6ನೇ ಪ್ರಕರಣದ ಅಡಿಯಲ್ಲಿ ಸದಸ್ಯನನ್ನು ತೆಗೆದುಹಾಕುವುದಕ್ಕಾಗಿ ಯಾವುದೇ ಷರತ್ತುಗಳಿಗೆ ಒಳಪಡಿಸತಕ್ಕದ್ದಲ್ಲ. 4. 5(3)ನೇ ಪ್ರಕರಣದ ಅಡಿಯಲ್ಲಿ ಸರ್ಕಾರೇತರ ಸದಸ್ಯರಿಗೆ ಭತ್ಯೆಗಳು:- ಸರ್ಕಾರದಿಂದ ನಾಮ ನಿರ್ದೇಶಿತನಾದ ಅಧಿಕಾರೇತರ ಸದಸ್ಯನು ಪ್ರತಿ ದಿನ 1000/- ರೂಪಾಯಿಗಳ ಸಭಾಭತ್ಯೆಗೆ ಅರ್ಹನಾಗಿರತಕ್ಕದ್ದು ಮತ್ತು ಪ್ರಯಾಣದ ಉದ್ದೇಶಕ್ಕಾಗಿ ಪ್ರಥಮ ದರ್ಜೆ ರೈಲು ದರಕ್ಕೆ ಹಕ್ಕುಳ್ಳವನಾಗಿರತಕ್ಕದ್ದು.