ಕರ್ನಾಟಕ ರಾಜ್ಯಹತ್ರ
ಅಧಿಕೃತವಾಗಿ ಪ್ರಕಟಿಸಲಾದುದು ವಿಶೇಷ ರಾಜ್ಯ ಪತ್ರಿಕೆ
| ಭಾಗ-೪ಎ | ಬೆಂಗಳೂರು, ಬುಧವಾರ, ೦೭, ಜುಲೈ, ೨೦೨೧(ಆಷಾಢ, ೧೬, ಶಕವರ್ಷ, ೧೯೪೩) BENGALURU, WEDNESDAY, 07, JULY, 2021 (ASHADHA, 16, SHAKAVARSHA, 1943) | ನಂ. ೬೮೬ | ||
| Part —IVA | No. 686 |
ಕರ್ನಾಟಕ ಸರ್ಕಾರ
ಸಂಖ್ಯೆ: ಸಿಆಸುಇ 252 ಸೇನೆನಿ 2020(ಭಾ-1)
ವಿಧಾನ ಸೌಧ, ಬೆಂಗಳೂರು, ದಿನಾಂಕ: 07.07.2021
ಸಂಖ್ಯೆ: ಸಿಆಸುಇ 252 ಸೇನೆನಿ 2020(ಭಾ-1) ಕರ್ನಾಟಕ ಸರ್ಕಾರದ ಸಚಿವಾಲಯ,
ಅಧಿಸೂಚನೆ
ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ: 16.06.2021ರ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ 11(ಓಎ(ನಂ-604)ರಲ್ಲಿ ಅಧಿಸೂಚನೆ ಸಂಖ್ಯೆ: ಸಿಆಸುಇ 252 ಸೆನೆನಿ 2020(ಭಾ-1) ದಿನಾಂಕ: 16.06.2021ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಬಹುದಾದಂಂತಹ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ಹಾನಿಸಲಾಗಿರುವುದರಿಂದ.
ಸದರಿ ರಾಜ್ಯಪತ್ರವನ್ನು ದಿನಾಂಕ: lode ಜೂನ್ 2021ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ.
ಮತ್ತು ಸದರಿ ಕರಡಿನ ಬಗ್ಗೆ ಯಾವುದೇ ಆಕ್ಷೇಪಣೆ/ ಸಲಹೆಯು ರಾಜ್ಯ ಸರ್ಕಾರದಲ್ಲಿ ಸ್ವೀಕೃತವಾಗಿಲ್ಲದಿರುವುದರಿಂದ;
ಈಗ ಆದ್ದರಿಂದ, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸುತ್ತದೆ, ಎಂದರೆ:-
ನಿಯಮಗಳು
1 ಹೆಸರು ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2021 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.