Annexure
(2) ಅಧಿಕೃತ ಗೆಜೆಟ್ನಲ್ಲಿ ಅವುಗಳ ಅಂತಿಮ ಪ್ರಕಟಣೆಯ ದಿನಾಂಕದಿಂದ ಅವು ಜಾರಿಗೆ ಬರುತ್ತವೆ.
(3) ಈ ನಿಯಮಗಳು 2025-26ನೇ ಶೈಕ್ಷಣಿಕ ವರ್ಷದಿಂದ ಮತ್ತು ನಂತರದ ಶೈಕ್ಷಣಿಕ ವರ್ಷದಿಂದ ಮಂಡಳಿಯ ಪರೀಕ್ಷೆಗೆ ಹಾಜರಾಗುವ ಎಲ್ಲಾ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತವೆ.
- ಕನಿಷ್ಕ ಉತ್ತೀರ್ಣ ಶೇಕಡಾವಾರು: - ಕನಿಷ್ಠ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಈ ಕೆಳಗಿನಂತೆ ನಿಯಂತ್ರಿಸಲಾಗುತ್ತದೆ, ಅವುಗಳೆಂದರೆ: -
(ಎ) ಅಭ್ಯರ್ಥಿಯು ಪ್ರತಿ ವಿಷಯದಲ್ಲಿ ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಥವಾ ಪ್ರಾಯೋಗಿಕ ಪರೀಕ್ಬ್ಚೆಯಲ್ಲಿ ಪಡೆದ ಅಂಕಗಳನ್ನು ಒಳಗೊಂಡಂತೆ ಪ್ರತಿ ವಿಷಯದ ಒಟ್ಟು ಅಂಕಗಳಲ್ಲಿ FIR, 30% ಅಂಕಗಳನ್ನು ಪಡೆದಲ್ಲಿ ಹಾಗೂ ಎಲ್ಲಾ ವಿಷಯಗಳಲ್ಲಿ ಒಟ್ಟಾರೆಯಾಗಿ 33% ಅಂಕಗಳನ್ನು ಪಡೆದಲ್ಲಿ ಅಂತಕಾ ಅಭ್ಯರ್ಥಿಯನ್ನು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲಾಗುತ್ತದೆ.
(ಬಿ) ಯಾವುದೇ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನವಿಲ್ಲದ ವಿಷಯಗಳಲ್ಲಿ, 80 ಅಂಕಗಳ ಲಿಖಿತ ಪರೀಕ್ಬೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲು, ಅಭ್ಯರ್ಥಿಯು. ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕಾಗುತ್ತದೆ:
ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.
(ಸಿ) ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನ ಇರುವ ವಿಷಯಗಳಲ್ಲಿ, 70 ಅಂಕಗಳ ಲಿಖಿತ ಪರೀಕ್ಟೆಯಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲೂ ಕನಿಷ್ಠ 21 ಅಂಕಗಳನ್ನು ಪಡೆಯಬೇಕು:
ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.
- ಪ್ರಾಯೋಗಿಕ ಪರೀಕ್ಷೆಗಳಿಗೆ ಸಾಮಾನ್ಯ ಷರತ್ತುಗಳು:- ಪ್ರಾಯೋಗಿಕ ಅಂಶವನ್ನು ಹೊಂದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಷರತ್ತುಗಳ ಪ್ರಕಾರ, ಪ್ರಾಯೋಗಿಕ ಪರೀಕ್ಷೆಗೆ ಅಸ್ತಿತ್ವದಲ್ಲಿರುವ 30 ಅಂಕಗಳ ಹಂ೦ಚಿಕೆಯಿಂದ ವಿಚಲನಗೊಂಡು, ಪ್ರಾಯೋಗಿಕ ಪರೀಕ್ಷೆಯನ್ನು ಗರಿಷ್ಠ 20 ಅಂಕಗಳಿಗೆ ನಡೆಸಲಾಗುವುದು ಮತ್ತು ಉಳಿದ 10 ಅಂಕಗಳನ್ನು ಈ ಕೆಳಗಿನ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗೆ ನೀಡಲಾಗುತ್ತದೆ, ಅವುಗಳೆಂದರೆ
(ಎ) ಅಭ್ಯರ್ಥಿಯು ಪ್ರತಿ ವಿಷಯದಲ್ಲೂ (ತಾತ್ವಿಕ ಮತ್ತು ಪ್ರಾಯೋಗಿಕ ತರಗತಿಗಳು ಸೇರಿದಂತೆ) ಕನಿಷ್ಠ 75% ಹಾಜರಾತಿಯನ್ನು BOOHBE), ಅಂತಹ ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗುತ್ತಾರೆ;
R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297
(ಬಿ) ಅಭ್ಯರ್ಥಿಯು ಪ್ರತಿಯೊಂದು ಪ್ರಾಯೋಗಿಕ ವಿಷಯಕ್ಕೆ ನಿರ್ದಿಷ್ಟಪಡಿಸಿದ BAIR, ಸಂಖ್ಯೆಯ ಪ್ರಯೋಗಗಳನ್ನು ನಿರ್ವಹಿಸಿರಬೇಕು.
(A) ಅಭ್ಯರ್ಥಿಯು ಪ್ರಾಯೊಗಿಕ ದಾಖಲೆ ಪುಸ್ತಕಗಳಲ್ಲಿ ನಿರ್ವಹಿಸಿದ ಪ್ರಯೋಗಗಳನ್ನು ದಾಖಲಿಸಿ ಅದನ್ನು ಸಂಬಂಧಿಸಿದ ವಿಷಯದ ಉಪನ್ಯಾಸಕರಿಂದ ದೃಢೀಕರಿಸಿ ಸಲ್ಲಿಸಿರಬೇಕು; ಮತ್ತು
(ಡಿ) ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿರಬೇಕು.
Annexure
(ಎಸ್. ಪ್ರಕಾಶ) ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರೌಢ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು
By order and in the name of Governor of Karnataka,
(S. PRAKASHA) Under Secretary to Government (Secondary) Department of School Education and Literacy
ಕರ್ನಾಟಕ ಸರ್ಕಾರ
ಸಂಖ್ಯೆ: ಇಪಿ 244 ಎಸ್ಎಲ್ಬಿ 2025
ಬಹುಮಹಡಿಗಳ ಕಟ್ಟಡ, ಬೆಂಗಳೂರು, ದಿನಾಂಕ:15.10.2025
ಸಂಖ್ಯೆ: ಇಪಿ 244 ಎಸ್ಎಲ್ಬಿ 2025 ಕರ್ನಾಟಕ ಸರ್ಕಾರ ಸಚಿವಾಲಯ,
ಅಧಿಸೂಚನೆ
1983 ರ ಕರ್ನಾಟಕ ಶಿಕ್ಷಣ ಕಾಯ್ದೆಯ (1995ರ ಕರ್ನಾಟಕ ಕಾಯ್ದೆ-1) ಸೆಕ್ಷನ್ 7ರ ಉಪವಿಭಾಗ (1) ರ ಷರತ್ತು 0 ಮತ್ತು ಸೆಕ್ಟನ್ 145 ರ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ಅಧಿಸೂಚನೆ ಸಂಖ್ಯೆ:ಇಪಿ 244 ಎಸ್ಎಲ್ಬಿ 2025, ದಿನಾಂಕ:24.07.2025 ರಲ್ಲಿ ಪ್ರಕಟಿಸಿರುವ ಕರಡು ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪತ್ರದ ಭಾಗ 4 (ಐ) ರಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಇದರಿಂದ ಬಾಧಿತರಾಗುವ, ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲು, ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿರುತ್ತದೆ.
ದಿನಾಂಕ:24.07.2025 ರಲ್ಲಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿರುವ ಸದರಿ ಕರಡು ನಿಯಮಗಳಿಗೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ / ಸಲಹೆಗಳು ಸರ್ಕಾರದಲ್ಲಿ ಸ್ವೀಕೃತವಾಗದೇ ಇರುವುದರಿಂದ;
ಈಗ, ಕರ್ನಾಟಕ ಸರ್ಕಾರವು, 1983 ರ ಕರ್ನಾಟಕ ಶಿಕ್ಷಣ ಕಾಯ್ದೆಯ (1995ರ ಕರ್ನಾಟಕ ಕಾಯ್ದೆ-1) ಸೆಕ್ಷನ್ 7ರ ಉಪವಿಭಾಗ (1) ರ ಷರತ್ತು (i) ಮತ್ತು ಸೆಕ್ಷನ್ 145 ರ ಮೂಲಕ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸಿರುತ್ತದೆ. ಎಂದರೆ:-
ನಿಯಮಗಳು
- ಶೀರ್ಷಿಕೆ, ಪ್ರಾರಂಭ ಮತು ಅನ್ವಯಿಸುವಿಕೆ:- (1) ಈ ನಿಯಮಗಳನ್ನು ಕರ್ನಾಟಕ ಪದವಿ ಪೂರ್ವ BOLT, (ಮೌಲ್ಯಮಾಪನ ವಿಧಾನ) ನಿಯಮಗಳು, 2025 ಎಂದು ಕರೆಯತಕ್ಕದ್ದು. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,