(1) ಈ ನಿಯಮಗಳನ್ನು ಕರ್ನಾಟಕ ಅಬಕಾರಿ (ದೇಶಿ ಮತ್ತು ವಿದೇಶಿ ಮದ್ಯಗಳ ಮಾರಾಟ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು. (2) ಈ ನಿಯಮಗಳು, ಕರ್ನಾಟಕ ರಾಜ್ಯಪತ್ರದಲ್ಲಿ ಅವುಗಳನ್ನು ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.