2020ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 09 ಕರ್ನಾಟಕಪಟ್ಟಣಮತ್ತುಗ್ರಾಮಾಂತರಯೋಜನೆ (ತಿದ್ದುಪಡಿ) ಅಧ್ಯಾದೇಶ, 2020
(ಭಾರತ ಗಣರಾಜ್ಯದ ಎಪ್ಪತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2020ರ ಮೇ 22 ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 196ನ್ನು (1963ರ ಕರ್ನಾಟಕ ಅಧಿನಿಯಮ 11) ಮತ್ತಷ್ಟು ತಿದ್ದುಪಡಿ ಮಾಡಲು ಹಾಗೂ ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಒಂದು ಅಧ್ಯಾದೇಶ.
ಕರ್ನಾಟಕ ವಿಧಾನ ಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿಇನ್ನು. ಮುಂದೆ. ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸಲು, 3, ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕ ಮಾನ್ಯ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;
ಆದ್ದರಿಂದ ಈಗ, ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕದ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿದ್ದಾರೆ, ಎಂದರೆ;-