ಅಧಿನಿಯಮದ 3ನೇ ಪ್ರಕರಣದ 210) ಉಪ ಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2025 ರ ಕರಡನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ೩೧೧೧/57 /GPK/2025 (ಐ, ದಿನಾಂಕ: 17-07-2025 ರ ಮೂಲಕ ಕರ್ನಾಟಕ ವಿಶೇಷ ರಾಜ್ಯ ಪತ್ರದ ಭಾಗ IVA ರ ಮೂಲಕ ಪ್ರಕಟಿಸಿ ಸದರಿ ನಿಯಮಗಳಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಪ್ರಕಟಣೆಯ ದಿನಾಂಕದಿಂದ ಹದಿನೈದು ದಿನಗಳ ಒಳಗಾಗಿ ಸಲ್ಲಿಸಲು ಆಹ್ವಾನಿಸಲಾಗಿರುವುದರಿಂದ,
ಸದರಿ ಕರಡನ್ನು ದಿನಾಂಕ: 17-07-2025 ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿದ್ದರಿಂದ;
ಮತ್ತು ಈ ಸಂಬಂಧ ಸ್ವೀಕರಿಸಲಾದ ಆಕ್ಷೇಪಣೆ ಮತ್ತು ಸಲಹೆಗಳನ್ನು ಸರ್ಕಾರವು ಪರಿಗಣಿಸಿರುವುದರಿಂದ;
ಈಗ ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ರ 3ನೇ ಪ್ರಕರಣದ (1)ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಏನೆಂದರೆ:-
ನಿಯಮಗಳು