(1) ಈ ನಿಯಮಗಳನ್ನು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಿಯಮಗಳು, 2022 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಿಯಮಗಳು, 2022., Kannada, Culture, Information & Tourism Department
2022 · PDF page 1
Hover any section to copy its link or text, ask Copilot about it, or bookmark it.
(1) ಈ ನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
(ಎ) “ಅಧಿನಿಯಮ” ಎಂದರೆ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2020. (2020ರ ಕರ್ನಾಟಕ ಅಧಿನಿಯಮ ಸಂಖ್ಯೆ 50)
(ಬಿ) “ಹಣಕಾಸು ವರ್ಷ” ಎಂದರೆ, ಪ್ರತಿವರ್ಷ ಏಪ್ರಿಲ್ 1ನೇ ದಿನಾಂಕದಿಂದ ಪ್ರಾರಂಭವಾಗಿ ಮಾರ್ಚ್ 31ನೇ ದಿನಾಂಕಕ್ಕೆ ಕೊನೆಗೊಳ್ಳುವ ಒಂದು ವರ್ಷದ ಅವಧಿ;
(ಸಿ) “ನಮೂನೆ” ಎಂದರೆ, ಈ ನಿಯಮಗಳಿಗೆ ಅನುಬಂಧಿಸಲಾದ ನಮೂನೆ;
(ಡಿ) “ಸರ್ಕಾರ” ಎಂದರೆ, ಕರ್ನಾಟಕ ರಾಜ್ಯ ಸರ್ಕಾರ;
(ಇ) “ಪ್ರಕರಣ” ಎಂದರೆ, ಅಧಿನಿಯಮದ ಪ್ರಕರಣ;
(2) ಇದರಲ್ಲಿ ಉಪಯೋಗಿಸಲಾದ ಆದರೆ ಪರಿಭಾಷಿಸದೇ ಇರುವ ಎಲ್ಲಾ ಇತರ ಪದಗಳು ಮತ್ತು ಅಭಿವ್ಯಕ್ತಿಗಳು ಅಧಿನಿಯಮದಲ್ಲಿ ಅವುಗಳಿಗೆ ಅನುಕ್ರಮವಾಗಿ ನೀಡಲಾದಂತದೇ ಅರ್ಥವನ್ನು ಹೊಂದಿರತಕ್ಕದ್ದು.