(1) ರಾಜ್ಯ ಸರ್ಕಾರವು, ಈ ಅಧ್ಯಾದೇಶದ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ತಾನು ಅವಶ್ಯಕವೆಂದು ಭಾವಿಸಿದಲ್ಲಿ, ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.
(2) ಈ ಅಧ್ಯಾದೇಶದ ಅಡಿಯಲ್ಲಿ ರಚಿಸಲಾದ ಪ್ರತಿಯೊಂದು ನಿಯಮವನ್ನು ಅದನ್ನು ರಚಿಸಿದ ತರುವಾಯ ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಪ್ರತಿಯೊಂದು ಸದನದ ಮುಂದೆ ಅದು ಅಧಿವೇಶನದಲ್ಲಿರುವಾಗ, ಒಂದು ಅಧಿವೇಶನದಲ್ಲಿ ಅಥವಾ ಒಂದಾದ ಮೇಲೊಂದರಂತೆ ಬರುವ ಎರಡು ಅಥವಾ ಹೆಚ್ಚು ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಮಂಡಿಸತಕ್ಕದ್ದು ಮತ್ತು ಅದನ್ನು ಹಾಗೆ ಮಂಡಿಸಿದ ಅಧಿವೇಶನದ ಅಥವಾ ನಿಕಟ ತರುವಾಯದ ಅಧಿವೇಶನಗಳ ಮುಕ್ತಾಯಕ್ಕೆ ಮುಂಚೆ, ಆ ನಿಯಮದಲ್ಲಿ ಯಾವುದೇ ಮಾರ್ಪಾಟನ್ನು ಮಾಡಬೇಕೆಂದು ಎರಡೂ ಸದನಗಳು ಒಪ್ಪಿದರೆ ಅಥವಾ ಆ ನಿಯಮವನ್ನು ಮಾಡಕೂಡದೆಂದು ಎರಡೂ ಸದನಗಳು ಒಪ್ಪಿದರೆ, ಆ ತರುವಾಯ ಆ ನಿಯಮವು ಹಾಗೆ ಮಾರ್ಪಾಟು ಹೊಂದಿದ ರೂಪದಲ್ಲಿ ಮಾತ್ರವೇ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರ ಪರಿಣಾಮಕಾರಿಯಾಗತಕ್ಕದ್ದಲ್ಲ; ಆದಾಗ್ಯೂ ಅಂಥ ಯಾವುದೇ ಮಾರ್ಪಾಟು ಅಥವಾ ರದ್ದಿಯಾತಿಯು ಆ ನಿಯಮದ ಮೇರೆಗೆ ತತ್ಪೂರ್ವದಲ್ಲಿ ಮಾಡಲಾದ ಯಾವುದೇ ಕಾರ್ಯದ ಸಿಂಧುತ್ವಕ್ಕೆ ಪ್ರತಿಕೂಲ ಪರಿಣಾಮವನ್ನುಂಟು ಮಾಡತಕ್ಕದ್ದಲ್ಲ.