(1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ತೊಂದರೆಯು ಉದ್ಭವಿಸಿದರೆ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯ ಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ ಅಂಥ ತೊಂದರೆಯನ್ನು ನಿವಾರಿಸುವ ಉದ್ದೇಶಕ್ಕಾಗಿ ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಾಗದಂತೆ ತನಗೆ ಅಗತ್ಯವೆಂದು ಅಥವಾ ಯುಕ್ತವೆಂದು ಕಂಡುಬರುವ ಅಂಥ ಉಪಬಂಧಗಳನ್ನು ರಚಿಸಬಹುದು:
ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯವಾದ ತರುವಾಯ ಯಾವುದೇ ಆದೇಶವನ್ನು ಹೊರಡಿಸತಕ್ಕದ್ದಲ್ಲ.
(2) ಈ ಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ಮಾಡಿದ ತರುವಾಯ ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಪ್ರತಿಯೊಂದು ಸದನದ ಮುಂದೆ ಮಂಡಿಸತಕ್ಕದ್ದು.