ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ ಅಧಿಸೂಚನೆ
ಸಂಖ್ಯೆ: ಸಿಐ : 162 : ಎಸ್ಪಿಐ : 2001 (ಭಾ), ಬೆಂಗಳೂರು, ದಿನಾಂಕ: 16ನೇ ಡಿಸೆಂಬರ್ 2003
ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) ಅಧಿನಿಯಮ, 2002 (2003ರ ಅಧಿನಿಯಮ ಸಂಖ್ಯೆ 45) ರ 1ನೇ ಪ್ರಕರಣದ (2)ನೇ ಉಪ ಪ್ರಕರಣದಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು 22.12.2003 ದಿನಾಂಕವನ್ನು ಸದರಿ ಅಧಿನಿಯಮದ ಎಲ್ಲಾ ಉಪಬಂಧಗಳು ಜಾರಿಗೆ ಬರತಕ್ಕ ದಿನಾಂಕವೆಂಬುದಾಗಿ ಈ ಮೂಲಕ ಗೊತ್ತುಪಡಿಸಿದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಕೆ.ಜಿ. ರಾಜಶೇಖರಪ್ಪ ಸರ್ಕಾರ ಅಧೀನ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಐಡಿ).
Published in the Karnataka Gazette Part IV-A Extraordinary No. 1671 dated 16-12-2003