(1) 4ನೇ ಪ್ರಕರಣದ ಉಪಬಂಧಗಳನ್ನು ಯಾರಾದರೂ ಉಲ್ಲಂಘಿಸಿದರೆ, ಅಪರಾಧ ನಿರ್ಣೀತನಾದ ಮೇಲೆ ಮೂರು ವರ್ಷಗಳಿಗೆ ಕಡಿಮೆಯಿಲ್ಲದ ಆದರೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಒಂದು ಜಾನುವಾರಿಗೆ ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದರೆ, ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು. ಎರಡನೇ ಅಥವಾ ಮುಂದುವರೆದ ಅಪರಾಧದ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದರೆ, ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಮುಂದುವರೆದ ಜುಲ್ಮಾನೆಯೊಂದಿಗೆ, ಜೊತೆಗೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ದಂಡಿತನಾಗತಕ್ಕದ್ದು.
(2) 4ನೇ ಪ್ರಕರಣದ ಹೊರತಾದ ಯಾವುದೇ ಉಪಬಂಧಗಳನ್ನು ಯಾರಾದರೂ ಉಲ್ಲಂಘಿಸಿದರೆ, ಅಪರಾಧ ನಿರ್ಣೀತನಾದ ಮೇರೆಗೆ ಮೂರು ವರ್ಷಗಳಿಗೆ ಕಡಿಮೆಯಿಲ್ಲದ ಆದರೆ, ಐದು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದರೆ, ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು.
(3) ಈ ಅಧ್ಯಾದೇಶದ ಅಡಿಯಲ್ಲಿ ರಚಿಸಿದ ನಿಯಮಗಳ ಯಾವುದೇ ಉಪಬಂಧಗಳನ್ನು ಯಾರಾದರೂ ಉಲ್ಲಂಘಿಸಿದರೆ, ಮೂರು ವರ್ಷಗಳಿಗೆ ಕಡಿಮೆಯಿಲ್ಲದ ಆದರೆ, ಐದು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಮತ್ತು ಐವತ್ತು ಸಾವಿರ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ದಂಡಿತನಾಗತಕ್ಕದ್ದು.