(1) ರಾಜ್ಯ ಸರ್ಕಾರವು, ಈ ಅಧ್ಯಾದೇಶದ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ, ಅಧಿಸೂಚನೆಯ ಮೂಲಕ ಮತ್ತು ಪೂರ್ವಪ್ರಕಟಣೆಯ ತರುವಾಯ ನಿಯಮಗಳನ್ನು ರಚಿಸಬಹುದು.
(2) ವಿಶೇಷವಾಗಿ ಮತ್ತು ಮುಂದಿನ ಅಧಿಕಾರಗಳ ಸಾಮಾನ್ಯನ್ವಯಕ್ಕೆ ಬಾಧಕವಾಗದ ಅಂಥ ನಿಯಮಗಳನ್ನು ಈ ಮುಂದಿನವುಗಳಿಗಾಗಿ ರಚಿಸಬಹುದು.-
(ಎ) ಈ ಅಧ್ಯಾದೇಶದಲ್ಲಿ ಉಪಬಂಧಿಸಿದವುಗಳ ಜೊತೆಯಲ್ಲಿ ಸಕ್ಷಮ ಪ್ರಾಧಿಕಾರಿಯ ಅಧಿಕಾರಗಳು ಮತ್ತು ಕರ್ತವ್ಯಗಳು;
(ಬಿ) 6ನೇ ಪ್ರಕರಣದ (2)ನೇ ಉಪಪ್ರಕರಣದ ಅಡಿಯಲ್ಲಿ ಜಾನುವಾರು ಸಾಗಾಣಿಕೆಗಾಗಿನ ಪರವಾನಗಿಗಳ ನಮೂನೆ;
(ಸಿ) 18ನೇ ಪ್ರಕರಣದ ಅಡಿಯಲ್ಲಿನ ಯಾವುದೇ ಜಾನುವಾರುಗಳಿಗೆ ಈ ಅಧ್ಯಾದೇಶಕ್ಕೆ ಒಳಪಟ್ಟ ಷರತ್ತುಗಳು ಅನ್ವಯಿಸತಕ್ಕದ್ದಲ್ಲ; ಮತ್ತು
(ಡಿ) ನಿಯಮಿಸಬಹುದಾದ ಅಥವಾ ಬೇಕಾದ ಯಾವುದೇ ಇತರ ವಿಷಯ.
(3) ಈ ಪ್ರಕರಣದ ಅಡಿಯಲ್ಲಿ ರಚಿಸಿದ ಪ್ರತಿಯೊಂದು ನಿಯಮವನ್ನು ಅಥವಾ ಹೊರಡಿಸಿದ ಅಧಿಸೂಚನೆಯನ್ನು, ಅದನ್ನು ರಚಿಸಿದ ತರುವಾಯ ಸಾಧ್ಯವಾದಷ್ಟು ಬೇಗನೇ ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಅದನ್ನು ಹಾಗೆ ಮಂಡಿಸಿದ ಅಧಿವೇಶನ ಅಥವಾ ನಿಕಟೋತ್ತರ ಅಧಿವೇಶನಗಳು ಮುಕ್ತಾಯವಾಗುವ ಮೊದಲು, ವಿಧಾನಮಂಡಲದ ಉಭಯ ಸದನಗಳು ನಿಯಮದಲ್ಲಿ ಅಥವಾ ಅಧಿಸೂಚನೆಯಲ್ಲಿ ಯಾವುದೇ ಮಾರ್ಪಾಟುಮಾಡಬೇಕೆಂದು ಒಪ್ಪಿದರೆ ಅಥವಾ ನಿಯಮವನ್ನು ಅಥವಾ ಅಧಿಸೂಚನೆಯನ್ನು ರಚಿಸಬಾರದೆಂದು ತೀರ್ಮಾನಿಸಿದರೆ, ಆ ತರುವಾಯ ಅಂಥ ನಿಯಮವು ಅಥವಾ ಅಧಿಸೂಚನೆಯು ಸಂದರ್ಭಾನುಸಾರ ಹಾಗೆ ಮಾರ್ಪಾಟಾದ ರೀತಿಯಲ್ಲಿ ಮಾತ್ರ ಪರಿಣಾಮಕಾರಿಯಾಗಿರತಕ್ಕದ್ದು ಅಥವಾ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಅಂಥ ಮಾರ್ಪಾಟು ಅಥವಾ ರದ್ದತಿಯು ಆ ನಿಯಮದ ಅಥವಾ ಅಧಿಸೂಚನೆಯ ಅಡಿಯಲ್ಲಿ ಈ ಹಿಂದೆ ಮಾಡಿದ ಯಾವುದೇ ಕಾರ್ಯಕ್ಕೂ ಬಾಧಕವಾಗತಕ್ಕದ್ದಲ್ಲ.