ಈ ಅಧ್ಯಾದೇಶದ ಉಪಬಂಧಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಾವುದೇ ತೊಂದರೆ ಉದ್ಭವಿಸಿದಲ್ಲಿ, ಸರ್ಕಾರವು ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ಆದೇಶದ ಮೂಲಕ, ತೊಂದರೆಗಳನ್ನು ನಿವಾರಿಸಲು ತನಗೆ ಅವಶ್ಯಕ ಅಥವಾ ಯುಕ್ತವೆಂದು ಕಂಡುಬರುವ ಮತ್ತು ಈ ಅಧ್ಯಾದೇಶದ ಉಪಬಂಧಗಳಿಗೆ ಅಸಂಗತವಾಗಿರದಂಥ ಉಪಬಂಧಗಳನ್ನು ರಚಿಸಬಹುದು:
ಪರಂತು, ಅಂಥ ಯಾವ ಆದೇಶವನ್ನೂ, ಈ ಅಧ್ಯಾದೇಶವು ಪ್ರಾರಂಭವಾದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಪೂರ್ಣಗೊಂಡ ತರುವಾಯ ಮಾಡತಕ್ಕದ್ದಲ್ಲ.