ನಮೂನೆ-29
68ನೇ ಪ್ರಕರಣದ (5)ನೇ ಉಪ-ಪ್ರಕರಣದ ಮೇರೆಗಿನ ಘೋಷಣೆ-ನಿಯಮ 96
ಕರ್ನಾಟಕ ಭೂಕಂದಾಯ ಅಧಿನಿಯಮ 1964ರ 68ನೇ ಪ್ರಕರಣದ (5)ನೇ ಉಪ-ಪ್ರಕರಣದಿಂದ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಸದರಿ ಪ್ರಕರಣದ (1)ನೇ ಉಪ-ಪ್ರಕರಣದ ಮೇರೆಗೆ ಹೊರಡಿಸಿದ ..................................... ದಿನಾಂಕದ .................................... ಕ್ರಮ ಸಂಖ್ಯೆಯ ಅಧಿಸೂಚನೆಯ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಮತ್ತು ಕೆಳಗಿನ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಸಾರ್ವಜನಿಕ ರಸ್ತೆಯ/ ಬೀದಿಯ/ಗಲ್ಲಿಯ/ದಾರಿಯ ಭಾಗವು ಸಾರ್ವಜನಿಕರ ಉಪಯೋಗಕ್ಕೆ ಅಗತ್ಯವಿಲ್ಲವೆಂದು ವ್ಯವಹರಣೆಗಳ ದಾಖಲೆಗಳನ್ನು ಮತ್ತು .......................................... ಜಿಲ್ಲೆಯ ಡೆಪ್ಯುಟಿ ಕಮೀಷನರ ವರದಿಯನ್ನು ರಾಜ್ಯ ಸರ್ಕಾರವು ಪರಿಶೀಲಿಸಿದ ತರುವಾಯ, ಸಾರ್ವಜನಿಕ ರಸ್ತೆಯ/ಬೀದಿಯ/ಗಲ್ಲಿಯ/ದಾರಿಯ ಅಂಥ ಭಾಗದಲ್ಲಿನ ಅಥವ ಅದರ ಮೇಲಣ ಸಾರ್ವಜನಿಕರ ಹಾಗೂ ವ್ಯಕ್ತಿಗಳ ಎಲ್ಲ ಹಕ್ಕುಗಳು ಕೊನೆಗೊಳ್ಳತಕ್ಕದೆಂದು ಈ ಮೂಲಕ ಘೋಷಿಸಿದೆ.