ಆರ್ಥಿಕ ಸಚಿವಾಲಯ ಅಧಿಸೂಚನೆ ಸಂಖ್ಯೆ: ಆಇ 19 ಕವಿಇ 2018, ಬೆಂಗಳೂರು, ದಿನಾಂಕ:03.07.2018
ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978ರ 3ನೇ ಪ್ರಕರಣದ (2ನೇ ಉಪ ಪ್ರಕರಣದ ಪರಂತುಕದೊಡನೆ ಓದಿಕೊಂಡು ಅದೇ 3ನೇ ಪ್ರಕರಣದ (1) ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವಾ ವಿಮಾ) ನಿಯಮಗಳು, 1958ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಈ ಕೆಳಕಂಡ ನಿಯಮಗಳನ್ನು ಈ ಮೂಲಕ ರಚಿಸಿದೆ, ಅಂದರೆ;-