ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಅಧಿಸೂಚನೆ
ಸಂಖ್ಯೆ: ಸಂವ್ಯಶಾಇ 76 ಶಾಸನ 2020, ಬೆಂಗಳೂರು, ದಿನಾಂಕ:19.11.2020. The Karnataka Stamp (Amendment) Ordinance, 2020 ಇದಕ್ಕೆ 2020ರ
ನವೆಂಬರ್ ZONY 19ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 24 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.
2020ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 24 ಕರ್ನಾಟಕ ಸ್ಟಾಂಪು (ತಿದ್ದುಪಡಿ) ಅಧ್ಯಾದೇಶ, 2020
(ಭಾರತ ಗಣರಾಜ್ಯದ ಎಪ್ಪತ್ತೊಂದನೇ ವರ್ಪದಲ್ಲಿ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2020ರ ನವೆಂಬರ್ 19ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)
ಕರ್ನಾಟಕ ಸ್ನ್ಮಾಂಪು ಅಧಿನಿಯಮ, 1957ನ್ನು (1957ರ ಕರ್ನಾಟಕ ಅಧಿನಿಯಮ 34) ಮತ್ತಷ್ಟು ತಿದ್ದುಪಡಿ ಮಾಡಲು ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಪ್ರಾಸಂಗಿಕ ವಿಪಯಗಳಿಗಾಗಿ ಒಂದು ಅಧ್ಯಾದೇಶ.
ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಪತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ. ಮತ್ತು ಇಲ್ಲಿ ಇನ್ನುಮುಂದೆ. ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸಲು, ಶೀಘ್ರ ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕದ ಮಾನ್ಯ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;
ಈಗ, ಭಾರತ ಸಂವಿಧಾನದ 213ನೇ ಅನುಚ್ಛೆಧದ (1ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕದ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿದ್ದಾರೆ, ಎಂದರೆ:-