(1) ಈ ಅಧ್ಯಾದೇಶವನ್ನು ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) (ವಿಶೇಷ ಉಪಬಂಧಗಳು) ಅಧ್ಯಾದೇಶ, 2007 ಎಂದು ಕರೆಯತಕ್ಕದ್ದು.
(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.
(3) ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ, 2006 ರಲ್ಲಿ (2006ರ ಕರ್ನಾಟಕ ಅಧಿನಿಯಮ 8) ಏನೇ ಒಳಗೊಂಡಿದ್ದರೂ 2007-08ನೇ ಶೈಕ್ಷಣಿಕ ವರ್ಷಕ್ಕಾಗಿ ಅನುದಾನಿತವಲ್ಲದ ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶಗಳು ಮತ್ತು ಶುಲ್ಕ ನಿಗದಿ ಈ ಅಧ್ಯಾದೇಶದ ಉಪಬಂಧಗಳ ಅನುಸಾರವಾಗಿ ನಡೆಯತಕ್ಕದ್ದು.