ಈ ಅಧ್ಯಾದೇಶದಲ್ಲಿ ಸಂದರ್ಭಕ್ಕೆ ಅನ್ಯಥಾ ಅಗತ್ಯವಿದ್ದ ಹೊರತು,-
(ಎ) "ಸಾಮಾನ್ಯ ಪ್ರವೇಶ ಪರೀಕ್ಷೆ" ಎಂದರೆ, ಏಕಗವಾಕ್ಷಿ ಪ್ರಕ್ರಿಯೆಯ ಮೂಲಕ ವೃತ್ತಿ ಶಿಕ್ಷಣ ವ್ಯಾಸಂಗ ಕ್ರಮಗಳಿಗೆ ಪ್ರವೇಶ ನೀಡುವ ಉದ್ದೇಶಕ್ಕಾಗಿ ಅಭ್ಯರ್ಥಿಗಳ ಮೆರಿಟ್ ಅನ್ನು ನಿರ್ಧರಿಸುವುದಕ್ಕಾಗಿ ನಡೆಸಲಾಗುವ ಪರೀಕ್ಷೆ ಮತ್ತು ತರುವಾಯದ ಕೇಂದ್ರೀಯ ಕೌನ್ಸೆಲಿಂಗ್ ವ್ಯವಸ್ಥೆ;
(ಬಿ) "ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕ" ಎಂದರೆ, ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಒಂದು ಏಜನ್ಸಿ;
(ಸಿ) "ಸಮ್ಮತಾಭಿಪ್ರಾಯದ ವ್ಯವಸ್ಥೆ ಅಥವಾ ಒಪ್ಪಂದ" ಎಂದರೆ, ವೃತ್ತಿ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ ಮತ್ತು ಶುಲ್ಕನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಅನುದಾನಿತವಲ್ಲದ ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳ ಸಂಘ ತಮ್ಮ ನಡುವೆ ಮಾಡಿಕೊಳ್ಳಬಹುದಾದ ಯಾವುದೇ ಒಪ್ಪಂದ;
(ಡಿ) "ಸಂಸ್ಥೆ" ಎಂದರೆ, ವೃತ್ತಿ ಶಿಕ್ಷಣ ಕೋರ್ಸ್ಗಳ ವಿದ್ಯಾಭ್ಯಾಸ ನೀಡುತ್ತಿರುವ ವೃತ್ತಿ ಶಿಕ್ಷಣ ಸಂಸ್ಥೆಗಳು;
(ಇ) "ಏಕ ಸದಸ್ಯ ನಿಯಂತ್ರಕ ಸಮಿತಿ" ಎಂದರೆ, 3ನೇ ಪ್ರಕರಣದ ಅಡಿಯಲ್ಲಿ ರಾಜ್ಯ ಸರ್ಕಾರವು ರಚಿಸಿದ ಸಮಿತಿ;
(ಎಫ್) "ವೃತ್ತಿ ಶಿಕ್ಷಣ ಕೋರ್ಸುಗಳು" ಎಂದರೆ,-
(I) ವೈದ್ಯಕೀಯ ಮತ್ತು ದಂತ ವೈದ್ಯ ಶಿಕ್ಷಣ ಸಂಸ್ಥೆಗಳಲ್ಲಿ,
(i) ಬ್ಯಾಚುಲರ್ ಆಫ್ ಮೆಡಿಸಿನ್ ಮತ್ತು ಬ್ಯಾಚುಲರ್ ಆಫ್ ಸರ್ಜರಿ; ಮತ್ತು
(ii) ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (II) ಇಂಜಿನಿಯರ್ ಸಂಸ್ಥೆಗಳಲ್ಲಿ,
(i) ಬ್ಯಾಚುಲರ್ ಆಫ್ ಇಂಜಿನಿಯರಿಂಗ್;
(ii) ಬ್ಯಾಚುಲರ್ ಆಫ್ ಟೆಕ್ನಾಲಜಿ
(iii) ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್;
(III) ಭಾರತೀಯ ವೈದ್ಯ ಪದ್ಧತಿ ಮತ್ತು ಹೋಮಿಯೋಪತಿ; ಮತ್ತು - ರಾಜ್ಯ ಸರ್ಕಾರವು ಅಧಿಸೂಚಿಸಬಹುದಾದಂಥ ಇತರ ಕೋರ್ಸುಗಳು.
(ಜಿ) "ಅನುದಾನಿತವಲ್ಲದ ಸಂಸ್ಥೆ" ಎಂದರೆ, ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ಅಥವಾ ಸಹಾಯಾನುದಾನವನ್ನು ಸ್ವೀಕರಿಸದ ಯಾವುದೇ ಖಾಸಗಿ ಆಡಳಿತವುಳ್ಳ ವೃತ್ತಿಶಿಕ್ಷಣ ಸಂಸ್ಥೆ.