ಈ ಅಧ್ಯಾದೇಶದ ಉಪಬಂಧಗಳನ್ನು ಅಥವಾ ಸಮ್ಮತಾಭಿಪ್ರಾಯ ವ್ಯವಸ್ಥೆ ಅಥವಾ ಒಪ್ಪಂದವನ್ನು ಉಲ್ಲಂಘಿಸಿ ಯಾವುವೇ ಖಾಸಗಿ ಅನುದಾನಿತವಲ್ಲದ ವೃತ್ತಿ ಶಿಕ್ಷಣ ಸಂಸ್ಥೆಗಳು 2007-08ನೇ ಶೈಕ್ಷಣಿಕ ವರ್ಷಕ್ಕಾಗಿ ಈ ಅಧ್ಯಾದೇಶದ ಪ್ರಾರಂಭಕ್ಕೆ ಮೊದಲು ಅಥವಾ ತರುವಾಯ ಮಾಡಿದ ಎಲ್ಲ ಪ್ರವೇಶಗಳು ಅಸಿಂಧುವಾಗಿರತಕ್ಕದ್ದು. ಅಂಥ ಉಲ್ಲಂಘನೆಯ ಸಂಬಂಧದಲ್ಲಿ ರಾಜ್ಯ ಸರ್ಕಾರವು ಅಂಥ ಪ್ರವೇಶಗಳನ್ನು ಅಥವಾ ಸಂದರ್ಭಾನುಸಾರ ಅಂಥ ಸಂಸ್ಥೆಯ ಸಂಯೋಜನೆಯನ್ನು ರದ್ದುಪಡಿಸುವುದಕ್ಕೆ ಸಂಬಂಧಪಟ್ಟ ವಿಶ್ವವಿದ್ಯಾಲಯಕ್ಕೆ ನಿರ್ದೇಶಿಸಬಹುದು.
Loading…